ಶಹಾಬಾದ: ಈ ದೇಶದ ಬಡ ವರ್ಗದ ಜನರ ಹಸಿವನ್ನು ನೀಗಿಸುವ ಮೂಲಕ ಈ ದೇಶದಲ್ಲಿ ನಿರಂತರ ಶಾಂತಿ ದೊರಕುವಂತೆ ಹೋರಾಟ ನಡೆಸಿದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಮ ಎಂದು ಬಾಬು ಜಗಜೀವನರಾಮ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ನಾಗಪ್ಪ ಮಾಸ್ಟರ್ ಬೆಳಮಗಿ ಹೇಳಿದರು.
ಅವರು ಸೋಮವಾರ ಡಾ.ಬಾಬುಜಗಜೀವನರಾಮ ಅವರ ಪುಣ್ಯ ಸ್ಮರಣೆ ನಿಮಿತ್ತ ನಗರಸಭೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ದೇಶದಲ್ಲಿ ಆಹಾರದ ಕೊರತೆ ಉಂಟಾದ ಸಮಯದಲ್ಲಿ ಕೃಷಿ ಸಚಿವರಾಗಿದ್ದ ಬಾಬು ಜಗಜೀವನರಾಮ ಅವರು ಜಾರಿಗೆ ತಂದ ಯೋಜನೆಗಳು ಹಸಿರು ಕ್ರಾಂತಿಗೆ ಕಾರಣವಾದವು. ಜಗಜೀವನರಾಮ ಅವರು ತಮ್ಮ ಜೀವನದಲ್ಲಿ ದೇಶದಲ್ಲಿರುವ ಬಡಜನರ ಏಳಿಗೆಗಾಗಿ ನಿರಂತರ ಹೋರಾಟ ನಡೆಸಿದರಲ್ಲದೇ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಗಾಂಧೀಜಿ ಜತೆ ಕೈಗೂಡಿಸಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ. ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಕೊಳ್ಳುವಂತಾಗಬೇಕೆಂದು ಹೇಳಿದರು.
ದಲಿತ ಮಾದಿಗ ಸಮನ್ವಯ ಸಮಿತಿ ಅಧ್ಯಕ್ಷ ಶಿವರಾಜ ಕೋರೆ ಮಾತನಾಡಿ,ಸಮಾಜದ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು. ಅವರು ದೇಶದ ಉಪಪ್ರಧಾನಿಗಳಾಗಿದ್ದ ಸದಂರ್ಭದಲ್ಲಿ ಜಾರಿಗೆ ತಂದ ಹಲವಾರು ಜನಪರ ಕಾರ್ಯಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…