ಬಿಸಿ ಬಿಸಿ ಸುದ್ದಿ

ತೊಗರಿ ಬೆಳೆ: ವಿಮೆ ಕಂತು ತುಂಬಲು ಜುಲೈ 31 ಕೊನೆಯ ದಿನ

ಕಲಬುರಗಿ: ಮುಂಗಾರು ಹಂಗಾಮಿಗೆ ಕಲಬುರಗಿ ಜಿಲ್ಲೆಯ ಪ್ರಮುಖ ಬೆಳೆಯಾದ ತೊಗರಿ ಮಳೆಯಾಶ್ರಿತ ಮತ್ತು ನೀರಾವರಿ ಬೆಳೆಗೆ ರೈತರು ಬೆಳೆ ವಿಮೆ ನೊಂದಣಿ ಮಾಡಿಸಲು 2020ರ ಜುಲೈ 31 ಕೊನೆಯ ದಿನವಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
2020 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿ ಲಿ. ಬೆಂಗಳೂರು (Universal Sompo General Insurance Co.Ltd, Bangalore) ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ.
ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಥಳ, ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ ಹಾಗೂ ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ರೈತ ಭಾಂದವರು ಉಳಿದ ಬೆಳೆಗಳ ಆಯ್ಕೆಗೆ ಸಂಬಂದಿಸಿದಂತೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೋಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೊಂದಣಿಯ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago