ಕಲಬುರಗಿ: ಕಲಬುರಗಿ ಲೋಕಸಭೆ ಹಾಗೂ ಚಿಂಚೋಳಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ, ಡಾ. ಉಮೇಶ ಜಾಧವ್ ಹಾಗೂ ಡಾ. ಅವಿನಾಶ ಜಾಧವ್ ಅವರು ಚುನಾವಣೆ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದ ಬಳಿಕ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು.
23 ತಾರೀಖು ಬಿಜೆಪಿ ಅಭ್ಯರ್ಥಿಗಳಿಗೆ ಐತಿಹಾಸಿಕ ದಿನವಾಗಿ ವಿವಿಧ ರೀತಿಯಲ್ಲಿ ಆಚರಿಸಲಾಯಿತು, ಕಲಬುರಗಿ ಲೋಕ ಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ಹಾಗೂ ಅವರ ಪುತ್ರ, ಆಯ್ಕೆಯಾಗಿ ಘೋಷಣೆಯಾದ ಕೂಡಲೇ ಚುನಾವಣೆ ಆಯೋಗದಿಂದ ಪ್ರಮಾಣ ಪತ್ರ ಪಡೆದ ನಂತರ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಶ್ರೀ ಶರಣಬಸವೇಶ್ವರ ದೇವಸ್ಥಾನ, ಚಿಂಚೋಳಿ ಕ್ಷೇತ್ರದ ರೇವಣಸಿದ್ದೇಶ್ವರ ದೇವಸ್ಥಾನ, ಕಾಳಗಿ ಕಾಳೇಶ್ವರ, ಪೌರಾದೇವಿ ದೇವಸ್ಥಾನ, ಸೂಗೂರು ದೇವಸ್ಥಾನ, ಯಲ್ಲಮ್ಮಾ ದೇವಸ್ಥಾನ, ಸಿದ್ಧಿಭಾಷಾ ದರ್ಗಾ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ರಾತ್ರೋ ರಾತ್ರಿ ಭೇಟಿ ದೇವರ ದರ್ಶನ ಪಡೆದು ವಿಷೇಶ ಪೂಜೆ ಸಲ್ಲಿಸುವ ಮೂಲಕ ತಮ್ಮ ಗೆಲುವಿಗೆ ಕೃತಜ್ಞತೆ, ಸಮರ್ಪಿಸಿದರು.
ಈ ಸಂದರ್ಭದಲ್ಲಿ ಚಿಂಚೋಳಿ ಕ್ಷೇತ್ರ ಉಪ ಚುನಾವಣೆಯಲ್ಲಿ ತನ ಪುತ್ರ ಡಾ. ಅವಿನಾಶ ಜಾಧವ್ ಕೂಡ ಗೆಲುವು ಸಾಧಿಸಿದ ಹಿನ್ನೆಲೆ, ಅವರ ತಂದೆ ಮತ್ತು ಪುತ್ರ ಜೊತೆಯಾಗಿ ದೇವರದ ದರ್ಶನ ಪಡೆದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಕುಟಂಬಸ್ಥರು ಜೊತೆಯಲ್ಲಿದ್ದರು ಎನ್ನಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…