ಕಲಬುರಗಿ: ಜಿಲ್ಲೆಯಲ್ಲಿ ಮಾಹಿತಿ ಆಯೋಗದ ನ್ಯಾಯ ಪೀಠ ರಚನೆ ಮಾಡಬೇಕೆಂದು ಮಹಾತಿ ಹಕ್ಕು ಮತ್ತು ಸಮಾಜಿಕ ಕಾರ್ಯಕರ್ತರ ಸಂಘದಿಂದ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಿಯ ಕೇಂದ್ರಗಳಲ್ಲಿ ಮಾಹಿತಿ ಆಯೋಗದ ಮಾಹಿತಿ ಪೀಠ ರಚಿಸುವ ಬಗ್ಗೆ. ಒಂದೇ ಸಮಯದಲ್ಲಿ ಘೋಷಣೆ ಆಗಿದ್ದರು ಕೂಡಾ ಇಲ್ಲಿಯವರೆಗೆ ಕಲಬುರಗಿಯಲ್ಲಿ ಮಾಹಿತಿ ಆಯೋಗದ ನ್ಯಾಯ ಪೀಠ ಸ್ಥಾಪನೆ ಮಾಡದೆ ಇರುವದು. ಮತ್ತು ಬೆಳಗಾವಿಯಲ್ಲಿ ಸ್ಥಾಪನೆ ಮಾಡಿರುವದು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ರಾಜ್ಯ ಸರ್ಕಾರದ ನೀತಿಯಾಗಿದೆ ಎಂದು ಸಂಘದ ಅಧ್ಯಕ್ಷರಾದ ಭೀಮನಗೌಡ ಪರಗೊಂಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೆ ಕಲ್ಯಾಣ (ಹೈದ್ರಾಬಾದ) ಕರ್ನಾಟಕದ ವಿಭಾಗಿಯ ಕೇಂದ್ರವಾದ ಕಲಬುರಗಿ ನಗರದಲ್ಲಿ ಮಾಹಿತಿ ಆಯೋಗದ ನ್ಯಾಯ ಪೀಠವನ್ನು ರಚಿಸಬೇಕು ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯ ಧೋರಣೆಯ ವಿರುದ್ಧ ಹೋರಾಟ ಮಾಡಲಾಗುವುದೆಂದು ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿಯಾದ ರಮೇಶ್ ಭೀಮಸಿಂಗ್ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…