ಶಹಾಪುರ: ಪ್ರಪಂಚಕ್ಕೆ ಮಾರಕವಾಗಿರುವ ಕೋವಿಡ್- 19 ನಮ್ಮ ಜೊತೆಯಲ್ಲಿಯೇ ಬರುವ ಕಾರಣ ನಾವು ಕೆಲಸದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳವುದರೊಂದಿಗೆ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರಾದ ದವಲಸಾಬ್ ನದಾಫ್ ಹೇಳಿದರು.
ಶಹಾಪುರ ತಾಲೂಕಿನ ದಿಗ್ಗಿ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕ ಸಂಘದ ಮತ್ತು ಗ್ರಾಮ ಪಂಚಾಯತ್ ಹೋತಪೇಠ ವತಿಯಿಂದ ಕೊರೊನಾ ಮತ್ತು ಉದ್ಯೋಗ ಖಾತ್ರಿ ಯೋಜನೆ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಯಿತು.
ಉದ್ಯೋಗ ಖಾತ್ರಿ ಯೋಜನೆಯ ಕುರಿತು ಮಾತನಾಡಿ, ಈ ಯೋಜನೆಯಡಿಯಲ್ಲಿ 100 ದಿನ ಕೆಲಸಮಾಡಿದ ನಂತರ ಕಾರ್ಮಿಕರ ಇಬ್ಬರ ಮಕ್ಕಳಿಗೆ ಸ್ಕಾಲರ್ ಶಿಪ್, ಮದುವೆಗೆ ಸಹಾಯಧನ, ಉಚಿತ ವೈದ್ಯಕೀಯ ಚಿಕಿತ್ಸೆ, ಹೀಗೆ ಹಲವಾರು ಸೌಲಭ್ಯಗಳನ್ನು ದೊರೆಯುತ್ತವೆ ಎಂದರು.
ನಂತರ ಮಾತನಾಡಿದ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಲಿ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಕೆಲಸವನ್ನು ನಿರ್ವಹಿಸುತ್ತೇವೆ ಜೊತೆಗೆ ಅವರ ಹಲವಾರು ಹೊಸ ಯೋಜನೆಗಳನ್ನು ರೂಪಿಸುತ್ತೇವೆ ಎಂದು ಅವರು ಮಾತನಾಡಿದರು.