ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ

0
50
ಕಲಬುರಗಿ: ವಾಡಿ ರೈಲು ನಿಲ್ದಾಣದಲ್ಲಿ ರೈಲ್ವೆ ನಂಬರ್ 12627 ಜನರಲ್ ಬೋಗಿಯಲ್ಲಿ 2020ರ ಮಾರ್ಚ್ 7ರಂದು ಪತ್ತೆಯಾದ ಸುಮಾರು 15 ದಿವಸದ ಹೆಣ್ಣು ಮಗುವನ್ನು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ರೈಲ್ವೆ ಚೈಲ್ಡ್ಲೈನ್ ವಾಡಿ ಸಿಬ್ಬಂದಿಯ ಮೂಲಕ ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶುಗೃಹದಲ್ಲಿ 2020ರ ಮಾರ್ಚ್ 17ರಂದು ದಾಖಲಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶು ಗೃಹದ ಅಧೀಕ್ಷಕರು ತಿಳಿಸಿದ್ದಾರೆ.
ಈ ಹೆಣ್ಣು ಮಗುವಿನ ಪಾಲನೆ, ಪೋಷಣೆ ಹಾಗೂ ರಕ್ಷಣೆಗಾಗಿ ಈ ಅಮೂಲ್ಯ ಶಿಶು ಗೃಹದಲ್ಲಿ ದಾಖಲಿಸಲಾಗಿದೆ. ಬಿಳುಪು ಬಣ್ಣ ಹೊಂದಿರುವ ಈ ಹೆಣ್ಣು ಮಗುವಿನ ಆರೋಗ್ಯ ಸ್ಥಿತಿ ಸಾಮಾನ್ಯವಾಗಿದೆ.
ಮೇಲ್ಕಂಡ ಹೆಣ್ಣು ಮಗುವಿನ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 30 ದಿನದೊಳಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಅಧೀಕ್ಷಕರು, ಅಮೂಲ್ಯ ಶಿಶು ಗೃಹ, ಆಳಂದ ರಸ್ತೆ ಕಲಬುರಗಿ ಕಚೇರಿಗೆ ಭೇಟಿ ನೀಡಬೇಕು. ತಪ್ಪಿದಲ್ಲಿ ಕಾನೂನು ಪ್ರಕಾರ ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಮೂಲ್ಯ ಶಿಶುಗೃಹದ ಅಧೀಕ್ಷಕರನ್ನು ಹಾಗೂ ದೂರವಾಣಿ ಸಂಖ್ಯೆ 08472-265588ನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here