ಶಹಾಬಾದ: ಜಗತ್ತಿನಲ್ಲಿ ಜನರ ನೆಮ್ಮದಿಗೆ ಭಂಗ ತಂದಿರುವ ಕೊರೊನಾ ವೈರಾಣುವಿನ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಸಾರಥ್ಯದ ವಿಶ್ವಜ್ಯೋತಿ ಪ್ರತಿಷ್ಠಾನದ 12ನೇ ವರ್ಷಾಚರಣೆ ನಿಮಿತ್ತ `ಆರೋಗ್ಯ ಪ್ರಜ್ಞೆಯೇ ವಿಶ್ವದ ವಿಜಯ ಕೊರೊನಾ ವಿರುದ್ಧ ಅರಿವಿನ ಯುದ್ಧ’ ಎನ್ನುವ ಕೈಚೀಲ, ಕೈಯಿಂದ ಯಾವುದನ್ನೇ ಮುಟ್ಟು ಕೈ ತೊಳೆದು ಭಯವು ದಾಟು… ಎಂಬ ಸಾಮಾಜಿಕ ಜಾಗೃತಿಯ ಸಂದೇಶ ಹೊತ್ತ ಕೈಚೀಲಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಮುಗುಳನಾಗಾವಿಯ ಸಿದ್ಧಲಿಂಗ ಶಿವಾಚಾರ್ಯರು ಹಾಗೂ ತಹಾಸೀಲ್ದಾರ್ ಸುರೇಶ ವರ್ಮಾ ಚಾಲನೆ ನೀಡಿದರು.
ಅವರು ಮಂಗಳವಾರ ಬಸವೇಶ್ವರ ವೃತ್ತದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ , ಮುಗುಳನಾಗಾವಿಯ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಹಾಗೂ ತಹಾಸೀಲ್ದಾರ್ ಸುರೇಶ ವರ್ಮಾ, ಕೊರೊನಾ ವೈರಸ್ ತಡೆಗಟ್ಟಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿಕೊಳ್ಳಿ. ಜನರಿಗೂ ತಿಳುವಳಿಕೆಯಿದ್ದರೂ ಸಾಮಾಜಿಕ ಅಂತರ, ಮಾಸ್ಕರ್ ಧರಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.ಇದರಿಂದ ಕೊರೊನಾ ಆಹ್ವಾನಕ್ಕೆ ದಾರಿಯಾಗುತ್ತದೆ.ಆರೋಗ್ಯ ಭಾಗ್ಯಕ್ಕಿಂತ ದೊಡ್ಡ ಭಾಗ್ಯ ಇನ್ನೊಂದಿಲ್ಲ. ಆರೋಗ್ಯದಿಂದ ಇದ್ದಾಗ ಮಾತ್ರ ಮತ್ತೊಂದು ಮಾಡಲು ಸಾಧ್ಯ ಎಂಬ ಅರಿವು ಜನರು ಮನದಟ್ಟು ಮಾಡಿಕೊಳ್ಳಬೇಕೆಂದು ಹೇಳಿದರಲ್ಲದೇ,ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ನೇತೃತ್ವದ ಕ್ರಿಯಾಶೀಲ ಗೆಳೆಯರ ಬಳಗ ಕೊರೊನಾ ವೈರಸ್ನ ಬಗ್ಗೆ ವಿಶಿಷ್ಟ ರೀತಿಯಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಸ್ವಾಗತ ಸಮಿತಿ ಅಧ್ಯಕ್ಷ ಪ್ರೊ.ಯಶ್ವಂತರಾಯ ಅಷ್ಟಗಿ ಮಾತನಾಡಿ, ನಾವು ಆರೋಗ್ಯ ಕಾಪಾಡುವುದರ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ.ಆದ್ದರಿಂದ ನಾವು ಮಾಸ್ಕ್ ಧರಿಸಬೇಕು.ಅಲ್ಲದೇ ಮತ್ತೊಬ್ಬರಿಗೂ ಮಾಸ್ಕ್ ಧರಿಸುವಂತೆ ತಿಳಿಸಬೇಕೆಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…