ಕಲಬುರಗಿ: ಕೋವಿಡ್ -19 ನಿಯಂತ್ರಣ ನೆಪ ಮಾಡಿಕೊಂಡು ರಾಜ್ಯ ಸರ್ಕಾರ ಈ ಸಾಲಿನ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್‌ಲಾಗ್ ಹುದ್ದೆಗಳೂ ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ವಿರೋಧಿಸಿ ಜಿಲ್ಲಾ ವಿದ್ಯಾರ್ಥಿ ಬಂಧುತ್ವ ವೇದಿಕೆಯ ದಿನೇಶ ಎನ್.ದೊಡ್ಡಮನಿ ಸರಕಾರದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿದ ಅವರು ಸರ್ಕಾರದ ಅರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಎಸ್ ಎನ್ ಪ್ರಸಾದ್ ಅವರು, ರಾಜ್ಯದಲ್ಲಿ ಕೋವಿಡ್ -19 ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಢೀಕರಿಸುವುದು ಅಗತ್ಯವಾಗಿದ್ದು ಅದಕ್ಕಾಗಿ ಈ ಸಾಲಿನ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್‌ಲಾಗ್ ಹುದ್ದೆಗಳೂ ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿರುವುದು ಖಂಡನೀಯ ವಿಷಯವಾದ್ದು, ಈ ಭಾಗದ ವಿರೋಧಿ ಮನೋಭಾವವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಗತ್ಯ ನೌಕರರಿಲ್ಲದೆ ಕೆಲಸಗಳು ಆಗುತ್ತಿಲ್ಲ. ದಿನನಿತ್ಯ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಇನ್ನೊಂದೆಡೆ ಅರ್ಹ ನಿರುದ್ಯೋಗಿ ಯುವಜನರು ಕೆಲಸದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಅಗತ್ಯವಿಲ್ಲದ ಮೂರ್ತಿ ಪ್ರತಿಷ್ಠಾಪನೆ, ಶ್ರೀಮಂತ ಬಂಡವಾಳಗಾರರ ಸಾಲ ಮನ್ನಾ, ರಿಯಾಯಿತಿ, ಶಾಸಕ-ಸಂಸದರಿಗೆ ಸೌಲಭ್ಯ ಹೆಚ್ಚಿಸಲು ಜನರ ತೆರಿಗೆಯ ಹಣವನ್ನು ಬೇಕಾಬಿಟ್ಟಿ ಬಳಸುವ ಈ ಸರ್ಕಾರಗಳು ಅಗತ್ಯ ನೇಮಕಾತಿಗಳನ್ನು ತಡೆಹಿಡಿಯುತ್ತಿರುವುದು ತಮ್ಮೊಳಗಿನ ಪ್ರಾದೇಶಿಕ ಅಸಮಾನತೆ ಯನ್ನು ಬಹಿರಂಗ ಪಡಿಸಿಕೊಂಡಿದೆ ಎಂದು ಕಿಡಿಕಾರಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮಾನತೆಯ ದೃಷ್ಟಿಯಿಂದ ಕಲ್ಯಾಣ ಕರ್ನಾಟಕದ ಹುದ್ದೆಗಳ ನೇಮಕಾತಿ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಅಗತ್ಯವಿದೆ. ನಾಡಿನ ಅಭಿವೃದ್ಧಿ ಮತ್ತು ಯುವಜನ ವಿರೋಧಿ ನಿಲುವಿನಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು. ತಕ್ಷಣದಿಂದಲೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ಕೊಡಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಪ್ರಬಲ ಹೋರಾಟವನ್ನು ಸಂಘಟಿಸಲಿದ್ದೇವೆ ಎಂದು ಈ ವೇಳೆಯಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…