ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ವೃದ್ಧ ಮತ್ತು ಯಾದಗಿರಿ ಜಿಲ್ಲೆಯ ಗುರುಮಠಕಲ್ ನಿವಾಸಿಯೊಬ್ಬ ಮೃತಪಟ್ಟಿರುವುದು ಮಂಗಳವಾರದ ಕೋವಿಡ್-19 ಬುಲೆಟಿನ್ ವರದಿಯಿಂದ ದೃಢವಾಗಿದೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿ ನಗರದ ಸ್ಟೇಷನ್ ಬಜಾರ್ ಪ್ರದೇಶದ 71 ವರ್ಷದ ವೃದ್ಧ (P-26671) ಜು.5 ರಂದು ಕಲಬುರಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿರುತ್ತಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ 40 ವರ್ಷದ ಪುರುಷ (P-26681) ಜು.3 ರಂದು ಅಸ್ಪತ್ರೆಗೆ ದಾಖಲಾಗಿ ಜು.5 ರಂದು ನಿಧನ ಹೊಂದಿದ್ದು, ಮಂಗಳವಾರ ಕೊರೋನಾ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…