ಬಿಸಿ ಬಿಸಿ ಸುದ್ದಿ

ವೀರಶೈವ-ಲಿಂಗಾಯತ ನೌಕರರಿಗೆ ಕಿರುಕುಳ: ಖರ್ಗೆ ಹೇಳಿಕೆಗೆ ನರಿಬೋಳ ಸ್ವಾಗತ

ಕಲಬುರಗಿ: ಜಿಲ್ಲೆಯಲ್ಲಿ ಇತ್ತೀಚಿಗೆ ಜಾತಿ ರಾಜಕೀಯ ಜೋರಾಗುತ್ತಿದ್ದು, ವೀರಶೈವ ಲಿಂಗಾಯತ ಸಮಾಜದ ಅಧಿಕಾರಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ, ಇದರಲ್ಲಿ ಲೋಕಸಭಾ ಸದಸ್ಯ ಡಾ ಉಮೇಶ ಜಾಧವ ಮುಂಚುಣಿಯಲ್ಲಿದ್ದಾರೆಂದು ಅಖೀಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಜಿಲ್ಲಾ ಗೌರವ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಆರೋಪಿಸಿದ್ದಾರೆ.

ಇತ್ತೀಚಿಗೆ ಚಿತ್ತಾಪೂರ ಶಾಸಕ ಪ್ರೀಯಾಂಕ ಖರ್ಗೆ ಬಿ.ಜೆ.ಪಿಯವರು ರೇಟ್ ಕಾರ್ಡ ಫೀಕ್ಷ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದು, ನೀಡಿದ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ದುಡ್ಡಿಗಾಗಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮುಖಾಂತರ ವರ್ಗಾವಣೆ ದಂದೆ ಬಿ.ಜಿ.ಪಿ ಕೆಲ ಪ್ರತಿನಿದಿಗಳು ಮಾಡುತ್ತಿದ್ದಾರೆ.  ಜಿಲ್ಲೆಯಲ್ಲಿ ವೀರಶೈವ ಸಮಾಜ ಬಿ.ಜೆ.ಪಿ ಪಕ್ಷವನ್ನು ಬೆಂಬಲಿಸುವುದಕ್ಕೆ ಪ್ರಮುಖ ಕಾರಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮುಖನೋಡಿ ವೀರಶೈವ ಸಮಾಜ ಬಿ.ಜೆ.ಪಿ ಪಕ್ಷವನ್ನು ಬೆಂಬಲಿಸಿದೆ ಎಂದರು. ಸದ್ಯದ ಬೆಳವಣಿಗೆ ಬಗ್ಗೆ ಸಿಎಂ ಜೊತೆ ಸಮಾಜದ ಮುಖಂಡರು ದೂರವಾಣಿಯಲ್ಲಿ ಮಾತನಾಡಿ ವಿವರಿಸಿದಾರೆ ಎಂದು ತಿಳಿಸಿದ್ದಾರೆ.

ವಿಚಿತ್ರ ಎಂದರೆ ಜಾಧವ ಅವರ ಜೊತೆ ಕೆಲವು ವೀರಶೈವ ಸಮಾಜದ ಜನಪ್ರತಿ ನಿದಿಗಳು ಮತ್ತು ಪಕ್ಷದ ಮುಖಂಡರು ಸೇರಿ ಅವರ ತಾಳಕ್ಕೆ ತಕ್ಕಂತೆ ಕುಣಿದು ವೀರಶೈವ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವುದು.  ವೀರಶೈವ ಸಮಾಜ ಸಹಿಸುವುದಿಲ್ಲ.  ಇವರನ್ನು ಕೂಡಾ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಖೀಲ ಭಾರತ ವೀರಶೈವ ಮಹಾಸಭಾ ಕಲಬುರಗಿ ಘಟಕದ ಕಾರ್ಯಕಾರಣಿ ಸಭೆ ನಡೆಯಲಿದ್ದು ಸಭೆಯಲ್ಲಿ ಈ ವಿಷಯ ಚರ್ಚಿಸಿ ಅಧ್ಯಕ್ಷರಾದ ಡಾ. ಶರಣಕುಮಾರ ಮೋದಿ, ಪ್ರಧಾನ ಕಾರ್ಯದರ್ಶಿಗಳಾದ ಡಾ.ಶರಣ ಬಿ. ಪಾಟೀಲ್ ಅವರ ಗಮನಕ್ಕೆ ತಂದು ಮಹಾಸಭೆ ಯುವ ಘಟಕ ನಿಯೋಗ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಇಲ್ಲಿನ ಎಲ್ಲಾ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಯುವ ಘಟಕ ಒತ್ತಾಯಿಸಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago