ಕರ್ನಾಟಕ: ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಮಿತಿಯ ಕರೆಯ ಮೇರೆಗೆ ರಾಯಚೂರು, ಕೊಪ್ಪಳ ದಾವಣಗೆರೆ, ಮಂಗಳೂರು, ಕೊಪ್ಪಳ, ಹಾವೇರಿ, ಗದಗ, ಸಿಂಧನೂರು, ಲಿಂಗಸ್ಗೂರು, ಸಿರವಾರ, ಮಸ್ಕಿ, ದೇವದುರ್ಗ, ಕಲಬುರಗಿ, ಕವಿತಾಳ, ಹಗ್ಗರಿ ಬೊಮ್ಮನಹಳ್ಳಿ, ಹೊಸಪೇಟೆ, ಗಂಗಾವತಿ ಸೇರಿ ರಾಜ್ಯ ವ್ಯಾಪಿ ಪ್ರತಿಭಟನೆಯನ್ನು ಮಾಡಲಾಯಿತು.
ಕೊರೋನಾ ವೈರಸ್ ನ ಅತಿಯಾದ ಹರಡುವಿಕೆ ಮತ್ತು ಲಾಕ್ ಡಾನ್ ನಿಂದಾಗಿ ನಮ್ಮ ವಿಶ್ವ,ನಮ್ಮ ದೇಶ ಸೇರಿ ಕರ್ನಾಟಕ ರಾಜ್ಯವು ಸಂಕಷ್ಟಕ್ಕೆ ಸಿಲುಕಿದೆ ರಾಜ್ಯದ ಜನತೆ ಹೊಟ್ಟೆ, ಬಟ್ಟೆ, ಆಶ್ರಯ ಮತ್ತು ಉದ್ಯೋಗ ಕ್ಕಾಗಿ ಪರದಾಡುತ್ತಾ ಆದಾಯ ಇಲ್ಲದೆ ಅತಿಯಾದ ಸಂಕಷ್ಟಕ್ಕೆ ಸಲುಕಿ ಸಾವು ಬದುಕಿನ ಮಧ್ಯೆ ಇದ್ದಾರೆ. ರಾಜ್ಯದ ವಿದ್ಯಾರ್ಥಿ ಸಮುದಾಯವು ಇದಕ್ಕೆ ಹೊರತಾಗಿಲ್ಲ ಆದರೆ ಆಳುವ ಸರ್ಕಾರ ಮಾತ್ರ ವಿದ್ಯಾರ್ಥಿ ಸಮಸ್ಯೆಗಳು ಸೇರಿ ಅವರ ಭವಿಷ್ಯದ ಶೈಕ್ಷಣಿಕ ಬದುಕಿನ ಬಗ್ಗೆ ಗಮನ ಹರಿಸುತ್ತಿಲ್ಲ ಹಾಗಾಗಿ ಕೂಡಲೇ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಯನ್ನು ಕೈ ಬಿಟ್ಟು ವಿದ್ಯಾರ್ಥಿ ಗಳ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕಾಗುತ್ತದೆಂದು ಒತ್ತಾಯಿಸಿದರು.
ರಾಜ್ಯದ ಡಿಗ್ರಿ, ಪಿಜಿ, ಇಂಜಿನಿಯರಿಂಗ್, ಡಿಪ್ಲೋಮಾ, ಕಾನೂನು ಹಾಗೂ ಎಲ್ಲಾ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಪಡಿಸಬೇಕು. ವಿದ್ಯಾರ್ಥೀಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಆರು ತಿಂಗಳ ಕಾಲ ಮನ್ನಾ ಮಾಡಬೇಕು. ಆನ್ ಲೈನ್ ಶಿಕ್ಷಣ ಕಡ್ಡಾಯ ಬೇಡ. ಆನ್ ಲೈನ್ ಶಿಕ್ಷಣ ಕೊಡುತ್ತೇವೆ ಎಂದು ಪೋಷಕರಿಂದ ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, 12 ತರಗತಿವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಕೊಡಿ ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಪ್ರತಿ ತಿಂಗಳು 10 ಅಕ್ಕಿ ಹಾಗೂ ಅಗತ್ಯ ಆಹಾರ ಪದಾರ್ಥಗಳನ್ನು 6 ತಿಂಗಳು ಕಾಲ ವಿದ್ಯಾರ್ಥಿಗಳ ಮನೆಗೆ ತಲುಪಿಸಬೇಕು.
ವೈದ್ಯಕೀಯ ವಿದ್ಯಾರ್ಥಿಗಳಿಗೆ 16 ತಿಂಗಳಿಂದ ಬಾಕಿ ಉಳಿಸಿರುವ ಶಿಷ್ಯ ವೇತನ ಕೂಡಲೇ ಬಿಡುಗಡೆ ಮಾಡಬೇಕು. ಫೆಲೋಶಿಪ್, ಸ್ಕಾಲರ್ಶಿಪ್, ಶೈಕ್ಷಣಿಕ ಆರ್ಥಿಕ ನೆರವುಗಳನ್ನು ಈ ಕೂಡಲೇ ವಿದ್ಯಾರ್ಥಿಗಳಿಗೆ ತಲುಪಲು ಸರ್ಕಾರ ಹಾಗೂ ವಿಶ್ವ ವಿದ್ಯಾಲಯಗಳು ಕ್ರಮ ಕೈಗೊಳ್ಳಬೇಕು, ಲಾಕ್ ಡೌನ್ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗಳ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು 7500/- ರೂಪಾಯಿಗಳನ್ನು ಆರು ತಿಂಗಳ ಕಾಲ ನೀಡಬೇಕು. ಜೊತೆಗೆ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು ಉಪನ್ಯಾಸಕರು ಹಾಗೂ ಕಾರ್ಮಿಕರಿಗೆ ಬಾಕಿ ಸಂಬಳ ಬಿಡುಗಡೆ ಮಾಡಬೇಕು. ಸಂಬಳ ಖಚಿತಪಡಿಸಬೇಕು. ಲಾಕ್ ಡೌನ್ ಸಮಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ನೀಡುವ ಪರಿಹಾರ ಧನ ನೀಡಬೇಕು.
ಗ್ರಾಮೀಣ ಪ್ರದೇಶದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಳಾಂತರ ನಿಲ್ಲಿಸಬೇಕು. ದೇಶಾದ್ಯಂತ ಯುವತಿಯರು ಮೇಲಿನ ಅತ್ಯಾಚಾರ ಮತ್ತು ಕೊಲೆಗಳ ಏರಿಕೆ ವಿರುದ್ಧ ಕ್ರಮಗಳನ್ನು ಕೈಗೊಳ್ಳಬೇಕು
ಕೋವಿಡ್-19 ಪರೀಕ್ಷೆಗಳನ್ನು ಉಚಿತವಾಗಿ ಮಾಡಬೇಕು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗೆ ದರ ನಿಗದಿ ಮಾಡಿರುವುದನ್ನು ಖಂಡಿಸಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಸಿ ಮತ್ತು ಪೆಟ್ರೋಲ್ ಡೀಸೆಲ್ ಗ್ಯಾಸ್ ಗಳನ್ನು ಜಿಎಸ್ಟಿ ಪರಿಧಿಯೊಳಗೆ ತರಲು ಒತ್ತಾಯಿಸಿ. ಹಾಗೂ ಉದ್ಯೋಗ ಸೃಷ್ಟಿಸಲು, ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸಲು ಒತ್ತಾಯಿಸಿ. ಹೊಸ ಶಿಕ್ಷಣ ನೀತಿ-2019 ಜಾರಿಯಿಂದಾಗುವ ಶಿಕ್ಷಣದ ಖಾಸಗೀಕರಣ ಮತ್ತು ಕೇಸರೀಕರಣದ ಅಪಾಯಕಾರಿ ನೀತಿಗಳನ್ನು ವಿರೋಧಿಸಿ ಸೇರಿಸಿ ವಿವಿಧ ಬೇಡಿಕೆಗಳ ಆಗ್ರಹಿಸಿ ಮುಖಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ, ತಹಶಿಲ್ದಾರರ ಮತ್ತು ಉಪ ತಹಶಿಲ್ದಾರ ರವರ ಮುಖಾಂತರ ಸಲ್ಲಿಸಿದರು.
ರಾಜ್ಯದ SFI ನಾಯಕರು ಸೇರಿ ವಿದ್ಯಾರ್ಥಿ ಗಳು ಈ ಪ್ರತಿಭಟನೆ ಯಲ್ಲಿ ರಾಜ್ಯದ ವಿವಿಧೆಡೆ ಪಾಲ್ಗೊಂಡಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…