ಕಲಬುರಗಿ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೇ ಇರುವ ಒಟ್ಟು 2053 ಜನರಿಂದ ಒಟ್ಟು 1,91,500 ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಮದುವೆ ಆಯೋಜಿಸಲು ತಹಶೀಲ್ದಾರರು ಪರವಾನಿಗೆ ನೀಡುವುದನ್ನು ಸಹ ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮದುವೆಗಳನ್ನು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ 5 ಜನ ಸಾಕ್ಷಿದಾರರೊಂದಿಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನರು ಭಾಗವಹಿಸುತ್ತಿರುವುದರಿಂದ ಕೊರೋನಾ ಸೋಂಕು ಹರಡುತ್ತಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕಲಬುರಗಿ ಜಿಲ್ಲೆಯಾದ್ಯಂತ ಮದುವೆ, ಸೀಮಂತ ಹಾಗೂ ಇನ್ನಿತರ ಸಾರ್ವಜನಿಕರು ಭಾಗವಹಿಸುವ ಕಾರ್ಯಕ್ರಮಗಳನ್ನು ಸಹ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ಮಾಸ್ಕ್ ಧರಿಸದೇ ಇರುವ ದಂಡ ವಸೂಲಿ ಕಾರ್ಯ ನಡೆದಿದೆ ಎಂದು ಈ ಸಂದರ್ಭದಲ್ಲಿ ನಡೆದಿದೆ ತಿಳಿಸಿದರು.