ಕಲಬುರಗಿ: ಸೇಡಂ ಮತ್ತಕ್ಷೇತ್ರದ ಬಿಜೆಪಿ ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರಿಗೆ ಕೊರೊನಾ ಪಾಜಿಟಿವ್ ಆಗಿದೆ ಎಂದು ತಿಳಿದುಬಂದಿದ್ದು, ಸದ್ಯ ಶಾಸಕ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
ಕಳೆದೆರಡು ದಿನಗಳ ಹಿಂದೆ ಶಾಸಕರ ಆಪ್ತ ಸಹಾಯಕರಿಗೆ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ವರದಿ ಬಂದಿತು. ಈ ಹಿನ್ನೆಲೆಯಲ್ಲಿ ಶಾಸಕರೂ ಸಹ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು, ಶಾಸಕರಿಗೂ ಸೋಂಕು ತಗುಲಿರುವ ಬಗ್ಗೆ ಸಹೋದರ ಅನೀಲ್ ಪಾಟೀಲ್ ತೇಲ್ಕೂರ ಮಾಹಿತಿ ಹಂಚಿಕೊಂಡಿದ್ದಾರೆ.