ಬಿಸಿ ಬಿಸಿ ಸುದ್ದಿ

ಶಾಸಕ ಗುತ್ತೇದಾರರಿಂದ ಬೆಂಗಳೂರಿನಲ್ಲಿ ಪಡಿತರ ಕಿಟ್ ವಿತರಣೆ

ಆಳಂದ: ಕೆಲಸ ಅರಿಸಿ ಹೋಗಿ ಬೆಂಗಳೂರಿನಲ್ಲಿ ವಾಸವಾಗಿರುವ ಆಳಂದ ತಾಲೂಕಿನ ನಾಗರಿಕರನ್ನು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಭೇಟಿಯಾಗಿ ಅವರಿಗೆ ಅವಶ್ಯಕವಾಗಿರುವ ಪಡಿತರ ಕಿಟ್ ವಿತರಿಸಿದರು.

ಕೊರೋನಾ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿರುವ ಜನತೆಗೆ ಸಹಾಯ ಹಸ್ತ ನೀಡಬೇಕಿರುವುದು ಎಲ್ಲರ ಕರ್ತವ್ಯವಾಗಿದೆ. ನಾಗರಿಕರು ಭಯಭೀತರಾಗದೆ ಆತ್ಮಸ್ಥೈರ್ಯದಿಂದ ಕೊರೋನಾ ಮಹಾಮಾರಿಯನ್ನು ಮೆಟ್ಟಿ ನಿಲ್ಲಬೇಕು ಎಂದು ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿಸಿದರು.

ಈ ವೈರಸ್ ಇನ್ನೂ ಹಲವು ತಿಂಗಳುಗಳ ಕಾಲ ಇರಲಿದೆ ಎಂದು ತಜ್ಞರ ವರದಿಗಳು ಹೇಳಿವೆ ಅದರ ಜೊತೆಯೆ ನಾವು ಬದುಕಬೇಕಾಗಿರುವುದರಿಂದ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುವುದು ಈಗಿನ ತುರ್ತು ಕಾರ್ಯವಾಗಬೇಕಿದೆ ಎಂದು ಜನರಿಗೆ ಮನವರಿಕೆ ಮಾಡಿದರು.

ಬೆಂಗಳೂರು ಬಹಳ ಜನರಿಗೆ ಅನ್ನ ಉದ್ಯೋಗ ನೀಡಿದೆ ಅದನ್ನು ತೊರೆದು ಹೋಗುವ ದುಡುಕಿನ ನಿರ್ಧಾರ ಯಾರೂ ತೆಗೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ರೋಗ ನಿಯಂತ್ರಣಕ್ಕೆ ಬರಲಿದೆ ಸರ್ಕಾರವು ಕೂಡ ಈ ನಿಟ್ಟಿನಲ್ಲಿ ಯುದ್ದೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago