ILI, SARI ಪ್ರಕರಣಗಳ ಮಾಹಿತಿ ನೀಡದ ಎರಡು ಖಾಸಗಿ ಆಸ್ಪತ್ರೆಗಳ ನೋಂದಣಿ ರದ್ದು

0
65

ಕಲಬುರಗಿ: ಕೋವಿಡ್-19 (ನೋವೆಲ್ ಕೊರೋನಾ) ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಅನುಕೂಲವಾಗುವಂತೆ ಆಸ್ಪತ್ರೆಗೆ ಬರುವ ಇನ್ಫ್ಲುಯೆಂಜಾ ಲೈಕ್ ಇಲ್‍ನೆಸ್ (ILI) ಮತ್ತು ತೀವ್ರ ಉಸಿರಾಟದ ತೊಂದರೆ (SARI) ಲಕ್ಷಣವಿರುವ ರೋಗಿಗಳ ಮಾಹಿತಿಯನ್ನು ಅಂತರ್ಜಾಲದಲ್ಲಿ ಅಥವಾ ಲಿಖಿತವಾಗಿ ಸಲ್ಲಿಸದ ನಗರದ 2 ಖಾಸಗಿ ಆಸ್ಪತ್ರೆಗಳ ನೋಂದಣಿಯನ್ನು ಕೆ.ಪಿ.ಎಂ.ಇ. ಕಾಯ್ದೆ 2017ರನ್ವಯ ನೋಂದಣಿ ರದ್ದುಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಎ. ಜಬ್ಬಾರ್ ಅವರು ತಿಳಿಸಿದ್ದಾರೆ.

ಕೊರೋನಾ ಸೋಂಕು ನಿಯಂತ್ರಣದಲ್ಲಿಡಲು ಜಿಲ್ಲೆಯಲ್ಲಿ ಕೆ.ಪಿ.ಎಂ.ಇ. ಕಾಯ್ದೆ 2017ರನ್ವಯ ನೋಂದಣಿ ಮಾಡಿಕೊಂಡಿರುವ ಆಸ್ಪತ್ರೆಗಳಿಗೆ ಈಗಾಗಲೇ ನೋಟೀಸ್ ಜಾರಿ ಮಾಡಿ (ILI) ಮತ್ತು (SARI) ಲಕ್ಷಣವಿರುವ ಪ್ರಕರಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲು ತಿಳಿಸಲಾಗಿತ್ತು. ಆದರೆ ಈ ಎರಡೂ ಆಸ್ಪತ್ರೆಗಳು ಮಾಹಿತಿ ನೀಡದೇ ಇರುವ ಪ್ರಯುಕ್ತ ನೋಂದಣಿಯನ್ನು ರದ್ದುಪಡಿಸಲಾಗಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here