ಕಲಬುರಗಿ: ಡಾ. ಬಾಬಾಸಾಹೇಬ್ ಭೀಮರಾವ ಅಂಬೇಡ್ಕರ್ ಅವರ ಮುಂಬೈನ ರಾಜಗೃಹ ನಿವಾಸದ ಮೇಲೆ ಮೊನ್ನೆ ಹಿಂದುತ್ವವಾದಿಗಳು ಕಲ್ಲು ಎಸೆದು ಹೂ ಕುಂಡಗಳು ಗ್ಲಾಸ್ ಒಡೆದು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಅಂತಹ ದೇಶ ದ್ರೋಹಿಗಳನ್ನು ಕೂಡಲೇ ಬಂಧಿಸಿ ಅವರನ್ನು ಗಡಿಪಾರು ಮಾಡಬೇಕು ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಡಾ. ಗಣಪತಿ ಸಿಂಧೆ ಆಗ್ರಹಿಸಿದ್ದಾರೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ. ಎಚ್ ಟಿ. ಫೋತೆ ಮಾತನಾಡಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಈ ದೇಶದ ಆಸ್ತಿ ಅವರಿಗೆ ಅವಮಾನ ಆಗಿದೆ ಅಂದರೆ ಇಡೀ ಎಲ್ಲಾ ಸಮುದಾಯದ ಜನರು ಕೂಡಿ ಈ ಘಟನೆಯನ್ನು ಖಂಡಿಸಿಬೇಕಾಗಿದೆ. ಈ ದೇಶದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅನುಯಾಯಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ದಿನ ನಿತ್ಯ ಅವಮಾನ ಅನ್ಯಾಯ ನಿರಂತರವಾಗಿ ನಡೆಯುತ್ತಿದೆ ಇದು ತುಂಬಾ ದುರಂತ ಅನಿಸುತ್ತದೆ. ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿಗಳ ಮುಖಾಂತರ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಡಾ. ವಿ. ಟಿ ಕಾಂಬಳೆ, ಡಾ. ಹಣಮಂತ ಜಂಗೆ, ಡಾ. ಜಗನ್ನಾಥ ಸಿಂಧೆ, ಜಯಪ್ರಕಾಶ್ ಕರಜಿಗಿ, ಪ್ರವೀಣ್ ಪಟ್ಟಣಕರ್, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…