ಶಹಾಪುರ: ತಾಲೂಕಿನ ಮಂಡಗಳ್ಳಿ,ಶಾರದಳ್ಳಿ, ಕೊಂಗಂಡಿ ಹಾಗೂ ಈ ಭಾಗದ ಇನ್ನುಳಿದ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿ ಸುಮಾರು 40 ವರ್ಷ ಹಳೆಯದಾಗಿರುವುದರಿಂದ ತೆಗೆದುಹಾಕಿ,ಹೊಸ ವಿದ್ಯುತ್ ತಂತಿ ಅಳವಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಶಹಾಪುರ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಮೀನುಗಳಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ಅಲ್ಲಲ್ಲಿ ಜೋತು ಬಿದ್ದು ಹರಿದು ಬಿಳುವ ಮುಂಚೆ ಜೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡು ಹೊಸ ವಿದ್ಯುತ್ ತಂತಿ ಅಳವಡಿಸಿ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಅಧಿಕಾರಿಗಳೇ ನೇರ ಹೊಣೆಯಾಗ ಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ರೈತ ಯುವ ಮುಖಂಡರಾದ ಅಶೋಕ್ ಯಕ್ಷಿಂತಿ,ಯಲ್ಲಪ್ಪ ಟಿ ಕಾಶಿರಾಜ,ಮಹೇಶ್ ಮಂಡಗಳ್ಳಿ, ವೆಂಕಟೇಶ್ ಶಾರದಳ್ಳಿ,ಹಾಗೂ ಇತರರು ಹಾಜರಿದ್ದರು. ಜೊತೆಗೆ ಈ ಭಾಗದ ಗ್ರಾಮಗಳಿಗೆ ನಿರಂತರ ಜ್ಯೋತಿ ಕಲ್ಪಿಸಬೇಕೆಂದು ಮನವಿ ಮಾಡಿಕೊಳ್ಳಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…