ತಹಸೀಲ್ದಾರ ಕೊಲೆ ಖಂಡಿಸಿ ತಾಲೂಕಾ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ

0
177

ಶಹಾಬಾದ:ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಭೂಮಿ ಸರ್ವೆ ಕಾರ್ಯಕ್ಕೆ ತೆರಳಿದ್ದ ತಹಸೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಗುರುವಾರ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಖಂಡಿಸಿ ಶುಕ್ರವಾರ ತಾಲೂಕಿನ ಸರ್ಕಾರಿ ನೌಕರರ ಸಂಘದವರು ತಹಸೀಲ್ದಾರ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.

ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈರಣ್ಣ ಕೆಂಭಾವಿ ನೇತೃತ್ವದಲ್ಲಿ ವಿವಿಧ ಇಲಾಖೆಯ ಸರ್ಕಾರಿ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೂಡಲೇ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದರು.ಅಲ್ಲದೇ ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ರೂಪಿಸಬೇಕು.ಹತ್ಯೆಯಾದ ತಹಸೀಲ್ದಾರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಹೇಳಿದರು.

Contact Your\'s Advertisement; 9902492681


ನಂತರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಉಪತಹಸೀಲ್ದಾರ ಮಲ್ಲಿಕಾರ್ಜುನ್ ರೆಡ್ಡಿ ಅವರ ಮುಖಾಂತರ ಮನವಿ ಪತ್ರ ಸಲ್ಲಿಸಿದರು.


ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕಾಂತ ಭರಣಿ, ಖಜಾಂಚಿ ರಮೇಶ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಸಂಜಯ್ ರಾಠೋಡ,ಏಮನಾಥ ರಾಠೋಡ,ಮೋಹನಕುಮಾರ ಗಾಯಕವಾಡ,ಶಿವಲಿಂಗಪ್ಪ ಹೆಬ್ಬಾಳಕರ್, ಪರಶುರಾಮ ಗುತ್ತಲ್,ಮಂಜುನಾಥ ಹಂದರಾಳ,ಯುಸುಫ್ ನಾಕೇದಾರ, ಹೆಚ್.ವಾಯ್.ರಡ್ಡೇರ್, ವಿಶಾಲ ಕುಲಕರ್ಣಿ, ಚನ್ನಬಸಪ್ಪ ಕೊಲ್ಲೂರ್, ಶಾಂತಮಲ್ಲ ಶೀವಭೋ, ಗಣೇಶ ಜಾಯಿ, ಬಸವರಾಜ ಮದ್ರಿಕಿ, ಮರಲಿಂಗ ಯಾದಗಿರಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here