ಕಲಬುರಗಿ: ಕಾರ್ಪೊರೇಷನ್ ಲಾರಿ ಹರಿದು ತಾಯಿ ಮತ್ತು ನಾಲ್ಕು ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ನಗರದ ಬಸವೇಶ್ವರ ಆಸ್ಪತ್ರೆ ಬಳಿ ನಡೆದಿದೆ.
ಸುಲ್ತಾನ ಬೇಗಂ (34), ಅವರ ನಾಲ್ಕು ತಿಂಗಳ ಮಗು ಇಂಚಿರಾ ಮಹಮ್ಮದಿ ಮೃತ ತಾಯಿ-ಮಗು ಎಂದು ತಿಳಿದು ಬಂದಿದ್ದು, ಮೃತರನ್ನು ಕಲಬುರಗಿಯ ಅಜಾದ್ ಪುರ ಬಡಾವಣೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಸುಲ್ತಾನ ಬೇಗಂ ಪತಿ ಮಹಮ್ಮದ್ ರಫೀಕ್, ಪುತ್ರಿ ಪಾಯಮಲ್ ನಾಜಾ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತಿ-ಪತ್ನಿ ಮಕ್ಕಳು ನಾಲ್ವರು ದ್ವಿಚಕ್ರ ವಾಹನದ ಮೇಲೆ ಬಸವೇಶ್ವರ ಆಸ್ಪತ್ರೆ ಬಳಿ ತೆರಳುವಾಗ ಎದುರಿಂದ ಬಂದ ಕಾರ್ಪೊರೇಷನ್ ಲಾರಿ ಹರಿದು ಹೊದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೆ ಮೃತ ಪಟ್ಟಿರುವ ದುರ್ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿದ ಸಾರ್ವಜನಿಕರು ಘಟನೆಯ ಕುರಿತು ಆಕ್ರೋಶಗೊಂಡ ಲಾರಿ ಮೇಲೆ ಕಲ್ಲು ತೂರಾಡಿದ್ದಾರೆ ಎನ್ನಲಾಗಿದೆ.
ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಣೆಯ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿದ್ದಾರೆ. ಘಟನೆ ಕುರಿತು ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…