ಸುರಪುರ:ಕೋಲಾರ ಜಿಲ್ಲೆ ಬಂಗಾರಪೇಟೆಯ ತಹಸೀಲ್ದಾರರು ಹಾಗು ತಾಲೂಕು ದಂಡಾಧಿಕಾರಿಗಳಾಗಿದ್ದ ಬಿ.ಕೆ.ಚಂದ್ರಮೌಳೇಶ್ವರರ ಹತ್ಯೆ ಖಂಡನಿಯವಾಗಿದೆ ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ ದರಬಾರಿ ಬೇಸರ ವ್ಯಕ್ತಪಡಿಸಿದರು.
ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಒಬ್ಬ ತಾಲೂಕು ದಂಡಾಧಿಕಾರಿಯ ಹತ್ಯೆ ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆಯಾಗಿದೆ. ಶೀಘ್ರವಾಗಿ ಹತ್ಯಗೈದ ಆರೋಪಿಗಳಿಗೆ ಉಗ್ರವಾದ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಕರ್ತವ್ಯ ನಿರತ ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಡೆದಿರುವುದು ನೌಕರರನ್ನು ಭಯಭೀತರನ್ನಾಗಿಸಿದೆ ಕಾರಣ ಸರ್ಕಾರಿ ನೌಕರರಿಗೆ ರಕ್ಷಣೆ ವದಗಿಸುವ ನಿಟ್ಟಿನಲ್ಲಿ ಸರ್ಕಾರವು ಚಿಂತಿಸಬೇಕು ಹಾಗೂ ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಉಗ್ರವಾದ ಶಿಕ್ಷವಿಧಿಸಬೇಕು ಎಂದು ಆಗ್ರಹಿಸಿದರು.
ನಂತರ ಮನವಿ ಪತ್ರವನ್ನು ತಹಶಿಲ್ದಾರ ನಿಂಗಣ್ಣ ಬಿರಾದಾರ್ ಅವರಿಗೆ ಸಲ್ಲಿಸಿದರು ನೌಕರರ ಸಂಘದ ಕಾರ್ಯದರ್ಶಿಗಳಾದ ಶರಣಬಸವ ಗಚ್ಚಿನಮನಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಗದ ಜಿಲ್ಲಾಧ್ಯಕ್ಷ ಹಳ್ಳೆಪ್ಪ ಕಾಜಾಂಜಿ, ದೈಹಿಕ ಶಿಕ್ಷಣಾಧಿಕಾರಿ ನಿಂಗಪ್ಪ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸೋಮರೆಡ್ಡಿ ಮಂಗಿಹಾಳ, ಚಂದ್ರಶೇಖರ ಹೊಕ್ರಾಣಿ, ಬಸನಗೌಡ, ಶರಣಗೌಡ, ತಿರಂದಾಜ್, ಶರಣಬಸವ ದೇವರಗೋನಾಲ, ಅಲಿಸಾ ಜಾನ್ ವ್ಯೆಸ್ಲಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…