ಸುರಪುರ: ಕಳೆದ ಆರು ವರ್ಷಗಳಿಂದ ರಾಜ್ಯದಲ್ಲಿ ಅನೇಕ ಜನಪರ ಕೆಲಸಗಳನ್ನು ಮಾಡುತ್ತಾ ಹಾಗು ವೀರಶೈವ ಲಿಂಗಾಯತ ಸಮುದಾಯದ ಜನರ ಕಷ್ಟ ಕಾರ್ಪಣ್ಯಗಳಿಗೆ ಧ್ವನಿಯಾಗಿರುವ ವೀರಶೈವ ಲಿಂಗಾಯತ ಯುವ ವೇದಿಕೆ ಮತ್ತಷ್ಟು ಜನೊಪಯೋಗಿ ಕಾರ್ಯಗಳನ್ನು ಮಾಡಲು ಅಣಿಯಾಗಿದೆ.
ಅದಕ್ಕಾಗಿ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಪ್ರಶಾಂತ ಕಲ್ಲೂರವರ ಆದೇಶದ ಮೇರೆಗೆ ಯಾದಗಿರಿ ಜಿಲ್ಲಾ ಮತ್ತು ಎಲ್ಲಾ ತಾಲೂಕುಗಳ ಪದಾಧಿಕಾರಿಗಳ ಹುದ್ದೆಗಳನ್ನು ವಿಸರ್ಜಿಸಿ ಯಾದಗಿರಿ ಜಿಲ್ಲಾ ಅಧ್ಯಕ್ಷ ಪ್ರದೀಪ ಕದರಾಪುರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗುವುದು ಎಂದು ವೇದಿಕೆ ರಾಜ್ಯ ಉಪಾಧ್ಯಕ್ಷ ಮಂಜುನಾಥ ಜಾಲಹಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಈ ಹಿಂದೆ ಇರುವ ಪದಾಧಿಕಾರಿಗಳಿಗೆ ಹೆಚ್ಚಿನ ಜವಬ್ದಾರಿ ವಹಿಸುವ ಜೊತೆಗೆ ಹೊಸಬರಿಗೆ ಸಮಾಜದ ಕೆಲಸ ಮಾಡಲು ಹುಮಸ್ಸು ಮೂಡಿಸುವ ಜೊತೆಗೆ ಸಂಘಟನೆಯನ್ನು ಮತ್ತಷ್ಟು ಬಲಿಷ್ಟಗೊಳಿಸುವ ಸಂಕಲ್ಪದೊಂದಿಗೆ ಹೊಸ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…