ವಾಡಿ: ಕೊರೊನಾ ಹೊಡೆತದಿಂದ ತತ್ತರಿಸಿರುವ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರಿಗೆ ಗೌರವ ವೇತನ ಕೈಗಿಟ್ಟು ರಜೆ ದಿನಗಳ ಸಂಕಷ್ಟಗಳನ್ನು ಮರೆತಿರುವ ಸರಕಾರ ಅಗೌರವದಿಂದ ನಡೆದುಕೊಂಡಿದೆ ಎಂದು ಆರೋಪಿಸಿ ರಾಜ್ಯದ ಅತಿಥಿ ಶಿಕ್ಷಕ ಸಮುದಾಯ ಆಲ್ ಇಂಡಿಯಾ ಡೆಮಾಕ್ರೇಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಶುಕ್ರವಾರ ಕರೆ ಕೊಟ್ಟ ಆನ್‌ಲೈನ್ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವ ಅತಿಥಿ ಉಪನ್ಯಾಸಕರು-ಶಿಕ್ಷಕರು, ತಮ್ಮ ಮನೆಯಂಗಳದಲ್ಲಿ ನಿಂತು ಬೇಡಿಕೆಗಳ ಬಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಸರಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಸರಕಾರ ಅತ್ಯಂತ ಕಡಿಮೆ ವೇತನವನ್ನು ಕೊಟ್ಟು ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೋಧನೆಯಿಲ್ಲದೆ ಮನೆಯಲ್ಲಿ ಉಳಿದುಕೊಂಡು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ.
ರಜೆ ತಿಂಗಳ ವೇತನ ಇಲ್ಲವಾದ್ದರಿಂದ ಬದುಕು ತೂಗಿಸುವುದು ಕಷ್ಟದ ಕೆಲಸವಾಗಿದೆ. ಸರಕಾರ ಕೋವಿಡ್-೧೯ ಪ್ಯಾಕೇಜ್ ಘೋಷಿಸದೆ ಅನ್ಯಾಯ ಮಾಡಿದೆ ಎಂದು ದೂರಿದ ವಾಡಿ, ರಾವೂರ, ನಾಲವಾರ ವಲಯದ ಅತಿಥಿ ಶಿಕ್ಷಕರು, ಸಮಾನ ದುಡಿಮೆಗೆ ಸಮಾನ ವೇತನ ಮಂಜೂರು ಮಾಡಬೇಕು. ಕೋವಿಡ್ ಸಂಕಷ್ಟ ಪರಿಹಾರ ಘೋಷಿಸಬೇಕು. ರಜೆ ತಿಂಗಳ ವೇತನ ಮಂಜೂರು ಮಾಡಬೇಕು. ಗೌರವ ಧನ ಹೆಚ್ಚಿಸಬೇಕು. ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…