ಜೇವರ್ಗಿ : ಕೋವಿಡ್-19 ಮಹಾಮಾರಿಯಿಂದ, ಮಾಡಲು ಕೆಲಸವಿಲ್ಲದೆ ದಿನದ ಹೊಟ್ಟೆ ತುಂಬಿಸಿಕೊಳ್ಳಲು ಕಷ್ಟ ಪಡುತ್ತಿರುವ ದೇವದಾಸಿ ಮಹಿಳೆಯರಿಗೆ ಪದವಿ ಮತ್ತು ಸ್ನಾತಕೋತ್ತರ ಎನ್.ಎಸ್.ಎಸ್ ಘಟಕದ ಅಡಿಯಲ್ಲಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಹಾರದ ಕೀಟ್‍ಗಳನ್ನು ವಿತರಿಸಿ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಕಿಟ್‍ಗಳನ್ನು ವಿತರಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ರಮೇಶ ಲಂಡನ್‍ಕರ್ ಮಾತನಾಡಿ, ಈ ಮಹಾಮಾರಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ, ಪ್ರತಿಯೊಬ್ಬರೂ ಕೂಡ ಇದರಿಂದ ಭಯಪಡದೆ ಎಚ್ಚರವಾಗಿರಬೇಕು, ಮನೆಯಿಂದ ಹೊರ ಹೋಗುವಾಗ ತಪ್ಪದೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು, ಒಬ್ಬರಿಂದ ಒಬ್ಬರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ಆಗಾಗೆ ಸ್ಯಾನಿಟೈಜರ್ ಅಥವಾ ಸಾಬೂನಿನಿಂದ ಕೈಗಳನ್ನು ತೊಳೆದುಕೊಳ್ಳುವುದರ ಮುಖಾಂತರ ಈ ರೋಗವನ್ನು ಹೊಡೆದೊಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಬಸವರಾಜ ಕೊಂಬಿನ್, ಡಾ. ಕರಿಗೂಳೇಶ್ವರ, ಡಾ. ಗೀತಾರಾಣಿ, ಡಾ. ವಿನೋದಕುಮಾರ, ವಿಜಯಕುಮಾರ ಜಿಡಗೆ, ವಾಯ್.ಡಿ ಬಡಿಗೇರ, ಡಾ. ಗಿರೀಶ ರಾಠೋಡ, ಡಾ. ಗುರುಪ್ರಕಾಶ ಹೂಗಾರ, ಪ್ರ.ಶಶಿಧರ ಯಡ್ರಾಮಿ, ನಾಗಣ್ಣಗೌಡ ಸೇರಿದಂತೆ ಅನೇಕರು ಕಾಲೇಜಿನ ಸಿಬ್ಬಂದಿವರ್ಗದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…