ಶಹಾಬಾದ:ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ ಮ್ಯಾಗೇರಿ, ಎಸ್ಎಸ್ಎಲ್ ಸಿ ಒಳಗೊಂಡ ಪದವಿವರೆಗಿನ ವಿದ್ಯಾರ್ಹತೆ ನಿಗದಿ ಮಾಡಬೇಕು.75%ರೊಳಗೆ ಅರ್ಹ ಅಭ್ಯರ್ಥಿಗಳು ಅಂಗನವಾಡಿ ನೌಕರರಿಗೆ ಸಿಗದಿದ್ದಲ್ಲಿ ಬೇರೆಯವರಿಗೆ ಕೊಡಬಹುದು ಎಂಬ ಷರತ್ತು ತೆಗೆಯಬೇಕು. ಐಸಿಡಿಎಸ್ ಯೋಜನೆಯ ಅನುದಾನವನ್ನು ಹೆಚ್ಚಿಸಬೇಕು. ಅಂಗನವಾಡಿ ನೌಕರರಿಗೆ ಕರೊನಾ ಸಂರಕ್ಷಣೆ ನೀಡಬೇಕು.ಅಲ್ಲದೇ ಒಳ್ಳೆಯ ಸ್ಯಾನಿಟೈಸರ್,ಮಾಸ್ಕ್,ಪಿಪಿಇ ಕಿಟ್ ಒದಗಿಸಬೇಕು. ಕರೊನಾ ವಾರಿಯರ್ಸ್ರಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ನೌಕರರಿಗೆ 25 ಸಾವಿರ ರೂ.ಸಹಾಯ ಧನ ನೀಡಬೇಕು.ಈಗಿರುವ ಎನ್ಪಿಎಸ್ ಲೈಟ್ ಬದಲಿಸಿ ಎಲ್ಐಸಿ ಆಧಾರಿತ ನಿವೃತ್ತಿ ವೇತನ ಕೊಡಬೇಕು.ಮುಂಗಡವಾಗಿ ಮೊಟ್ಟೆ ಬಿಲ್,ತಿಂಗಳಿಗೆ ಸರಿಯಾಗಿ ಬಾಡಿಗೆ,ಗ್ಯಾಸ್, ಗೌರವ ಧನವನ್ನು ಪಾವತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಸಿಐಟಿಯು ಮುಖಂಡ ಮಲ್ಲಣ್ಣ ಕಾರೊಳ್ಳಿ, ಅಂಗನವಾಡಿ ಕಾರ್ಯಕರ್ತ ಸಂಘದ ತಾಲೂಕಾ ಅಧ್ಯಕ್ಷ ಶೇಖಮ್ಮ ಕುರಿ, ಸಿಕನರ್ಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…