ಕಲಬುರಗಿ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲ ತಾಲ್ಲೂಕುಗಳಲ್ಲಿ 14 ರಿಂದು ಜುಲೈ 20 ವರೆಗೆ ನಿಯಮ ಬದ್ಧ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.
ಜು. 14ರಿಂದ 20ರವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದ್ದು, ಅಗತ್ಯ ವಸ್ತುಗಳಾದ ಕಿರಾಣಾ, ಕಾಯಿ ಪಲ್ಯ ಹಾಗೂ ಮೆಡಿಕಲ್ ಇನ್ನಿತರ ಅವಶ್ಯಕ ವಸ್ತುಗಳನ್ನು ಹೊರತುಪಡಿಸಿ ಉಳಿದ ಯಾವುದೇ ರೀತಿಯ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಂ.ಎಸ್.ಐ.ಎಲ್. ಪರವಾನಗಿ ಹೊಂದಿದ ಅಂಗಡಿಗಳಲ್ಲಿ ಮದ್ಯ ಮಾರಾಟವಿರುತ್ತದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪೆಟ್ರೋಲ್ ಬಂಕ್ ಗಳು ತೆರೆದಿರಲಿವೆ. ಪಾನ್ ಶಾಪ್ ಗಳು ತೆರೆಯುವಂತಿಲ್ಲ.
ಎಲ್ಲ ತರಹದ ಸರಕು ಸಾಗಾಣಿಕೆಗೆ ಪರವಾನಗಿ ರಹಿತವಾಗಿ ಸಂಚಾರಕ್ಕೆ ಅನುಮತಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರು ಗುರುತಿನ ಚೀಟಿ ಹೊಂದಿ ಕಾರ್ಯ ನಿರ್ವಹಿಸುವುದು, ಸಾರ್ವಜನಿಕ ಸೇವೆಗಳಲ್ಲಿ ತೊಡಗಿಸಿ ವೈದ್ಯಕೀಯ ಸಿಬ್ಬಂದಿಗಳಿಗೆ ಸಂಚರಿಸಲು ಯಾವುದೇ ಅನುಮತಿಯ ಅವಾಸ್ಯಕತೆ ಇರುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಗಸಿಪಡಿಸಿರುವ ಪರೀಕ್ಷೆಗಳಲ್ಲಿ ತೊಡಗಿರುವ ನೌಕರರು ಹಾಗೂ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಹೊಂದಿರತಕ್ಕದ್ದು, ಹೋಟೆಲ್ ಗಳಲ್ಲಿ ಕೇವಲ ಹೋಮ್ ಡಿಲೆವರಿಗೆ ಮಾತ್ರ ಅವಕಾಶವಿರಲಿದೆ.
ಕಲಬುರಗಿ ನಗರದಿಂದ ತಾಲ್ಲೂಕು ಪ್ರದೇಶಗಳಿಗೆ ಸಂಚರಿಸಲು ನಗರದ ಹೊರ ಹೊಲದಲ್ಲಿ ಬಸ್ ವ್ಯವಸ್ಥೆ ಇರಲಿದ್ದು, ಮೂರು ಟ್ರಿಪ್ ಗಳಲ್ಲಿ ಸಂಚರಿಸಲಿವೆ.
ಜಿಲ್ಲೆಯ ನಗರ ಪ್ರದೇಶದಲ್ಲಿ ನ ಎಲ್ಲ ತರಹದ ಮಾಸರಿ ವಾಹನಗಳಾದ ಆಟೋ ರಿಕ್ಷಾ, ಕಾರ್, ದ್ವಿ ಚಕ್ರ ವಾಹನಗಳ ಓಡಾಟ ನಿಷೇಧಿಸಿದೆ. ಇದು ತುರ್ತು ಪರಿಸ್ಥಿತಿಗೆ ಅನ್ಬಯಿಸುವುದಿಲ್ಲ. ಸಾರ್ವಜನಿಕರ ಎಲ್ಲ ತರಹದ ವೈಯಕ್ತಿಕ ಹಾಗೂ ಧಾರ್ಮಿಕ ಕಾರ್ಯಗಳಾದ ಮದುವೆ, ಮುಂಜವಿ, ಉರುಸ್, ಜಾತ್ರೆಗಳನ್ನು ನಿಷೇಧಿಸಲಾಗಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…