ರಾಜಗೃಹದ ಮೇಲೆ ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

0
31

ಕಲಬುರಗಿ: ಮುಂಬಯಿನ ದಾದರ್‌ನಲ್ಲಿರುವ ವಿಶ್ವರತ್ನ ಬಾಬಾಸಾಹೇಬ ಡಾ. ಬಿ.ಆರ್. ಅಂಬೇಡ್ಕರ ಅವರ ರಾಜಗೃಹ ನಿವಾಸದ ಮೇಲೆ ಕೆಲ ರಾಷ್ಟ್ರದ್ರೋಹಿಗಳು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತರ ಜನಜಾಗೃತಿ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.

ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಮಹಾರಾಷ್ಟ್ರ ರಾಜ್ಯದ ಮುಂಬಯಿನ ದಾದರ್‌ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರು ವಾಸವಿದ್ದ ರಾಜಗೃಹದ ನಿವಾಸದ ಮೇಲೆ ಉದ್ದೇಶಪೂರ್ವಕವಾಗಿ ದುಷ್ಕರ್ಮಿಗಳು ದಾಳಿ ಮಾಡಿದ ಸಂದರ್ಭದಲ್ಲಿ ಹೂವಿನ ಕುಂಡಗಳು, ಕಿಟಕಿಯ ಗಾಜುಗಳು, ಬಾಗಿಲುಗಳು ಧ್ವಂಸಗೊಂಡಿವೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಅಮೂಲ್ಯ ಕೃತಿಗಳನ್ನು ಧ್ವಂಸಗೊಳಿಸಲು ಪ್ರಯತ್ನಿಸಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

Contact Your\'s Advertisement; 9902492681

ಕೂಡಲೇ ಆರೋಪಿಗಳನ್ನು ಮಹಾರಾಷ್ಟ್ರ ಸರ್ಕಾರವು ಬಂಧಿಸಿ, ಅವರನ್ನು ಗಡಿಪಾರು ಮಾಡಬೇಕು ಹಾಗೂ ಅವರ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆಯನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಸಂಚಾಲಕ ರುಕ್ಕಪ್ಪ ಟಿ. ಕಾಂಬಳೆ, ಪ್ರದೀಪ ವೈ. ಭಾವೆ, ಅಮೀರಸಾಬ ನದಾಫ್, ರಾಮಾ ವಿ. ಪೂಜಾರಿ, ಜೈರಾರ ಕಿರಣಗಿಕರ ಮುಂತಾದವರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here