ನಾಳೆ ರಾತ್ರಿ 8 ಗಂಟೆಯಿಂದ ಜುಲೈ 22 ರವರೆಗೆ ಯಾದಗಿರಿ ಜಿಲ್ಲೆ ಲಾಕ್ ಡೌನ್

0
35

ಶಹಾಪುರ : ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ನಾಳೆ ರಾತ್ರಿ 8 ಗಂಟೆಯಿಂದ ಬರುವ ಜುಲೈ 22 ರ ಮಧ್ಯರಾತ್ರಿಯವರೆಗೆ ಯಾದಗಿರಿ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವಾಣ್ ಅನುಮತಿಯ ಮೇರೆಗೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಭೆ ಸಮಾರಂಭ,ಮದುವೆ, ಸಂತೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳು ಸಾಮಾಜಿಕ ಗುಂಪು ಸೇರುವುದನ್ನು ಹಾಗೂ ಇನ್ನಿತರ ಕಾರ್ಯಕ್ರಮಗಳು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

Contact Your\'s Advertisement; 9902492681

ಅಗತ್ಯ ದಿನಬಳಕೆ ವಸ್ತುಗಳ ಅಂಗಡಿಗಳು ಮಾತ್ರ ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ತೆರೆದಿರುತ್ತವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.ದಿನ ಬಳಕೆಯ ದಿನಸಿ ವಸ್ತುಗಳಾದ ತರಕಾರಿ,ಹಾಲು,ಹಣ್ಣು ಹಂಪಲುಗಳು,ಪೆಟ್ರೋಲ್ ಬಂಕುಗಳು ಹಾಗೂ ಇನ್ನಿತರ ಅವಶ್ಯಕ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿರುತ್ತವೆ.

ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.ಬ್ಯಾಂಕ್, ಪೋಸ್ಟ್ ಆಫೀಸ್, ಬಿ.ಎಸ್.ಎನ್.ಎಲ್. ಆಫೀಸ್ ಇನ್ನಿತರ ಸರ್ಕಾರಿ ಕಚೇರಿಗಳು ಹಾಗೂ ಆಸ್ಪತ್ರೆ ಔಷಧಿ ಅಂಗಡಿಗಳು ಮಾತ್ರ ತೆರೆದಿರುತ್ತವೆ.

ಸಾರ್ವಜನಿಕ ತುರ್ತು ಸೇವೆಗಳು ಹೊರತುಪಡಿಸಿ ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದರೆ ಅಂಥ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ .

ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಹ್ಯಾಂಡ್ ಗ್ಲೌಸ್ ಧರಿಸಬೇಕು ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.ಹಾಗೂ ಮುಂಜಾಗೃತಾ ಕ್ರಮವಾಗಿ ಕರೋನಾದಿಂದ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here