ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ದಸ್ತಾಪುರ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಡಾ. ಅಂಬೇಡ್ಕರ್ ಅವರ ಭಾಗ ಚಿತ್ರ ಅಪಮಾನ ಮಾಡಿರುವ ಘಟನೆ ಸಂಭವಿಸಿದೆ.
ದಸ್ತಾಪುರ ಗ್ರಾಮದಲ್ಲಿ ಕಿಡಗೇಡಿಗಳು ಗ್ರಾಮದಲ್ಲಿರುವ ಅಂಬೇಡ್ಕರ್ ಭಾವ ಚಿತ್ರಕ್ಕೆ ಸಗಣಿ ಎರಚಿರುವ ಘಟನೆ ನಡೆದಿದ್ದು, ಘಟನೆ ಮಾಹಿತ ಅರೇತ ದಲಿತ ಮುಂಖರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಸ್ಥಳದಲ್ಲೆ ಪ್ರತಿಭಟನೆ ನಡೆಸಿ, ಕೃತ್ಯವೆಸಗಿದ ಆರೋಪಿಗಳಿಗೆ ಬಂಧಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ಅರಿತ ಸ್ಥಳೀಯ ಠಾಣೆಯ ಪಿ.ಎಸ್.ಐ ಹಾಗೂ ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮದಲ್ಲಿರುವ ಬಿಗುವಿನ ವಾತಾವರಣ ತಿಳಿಗೊಳಿಸಿದರು. ನಂತರ ಗ್ರಾಮಕ್ಕೆ ಭೇಟಿ ನೀಡಿದ ಎಸ್.ಪಿ ಕೃತ್ಯದ ಕುರಿತು ತನಿಖೆ ನಡೆಸಲು ಆದೇಶ ನೀಡಿದ್ದು, ಈ ಕುರಿತು ಮಹಾಗಾಂವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.