ಬಿಸಿ ಬಿಸಿ ಸುದ್ದಿ

ಪುನರ್ ವಿಮರ್ಶೆ ಕಮಿಟಿ ಕೈಬಿಡಲು ಸಿಐಟಿಯು ಪ್ರತಿಭಟನೆ

ಕಲಬುರಗಿ: ರಾಜ್ಯದ ಗ್ರಾಮ ಪಂಚಾಯಿತಿ ನೌಕರರ ಕೆಲಸವನ್ನು ಪುನರ್ ವಿಮರ್ಶಿಸುವ ಕಮಿಟಿಯನ್ನು ಹಿಂಪಡೆದು, ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತಿ ನೌಕರರ ಸಂಘ (ಸಿಐಟಿಯು) ತಾಲ್ಲೂಕು ಸಮೀತಿ ಪದಾಧಿಕಾರಿಗಳು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ೬೦೨೪ ಗ್ರಾಮ ಪಂಚಾಯಿತಿಗಳಿದ್ದು, ಜನರಿಗೆ ಕಿರು ನೀರು ಸರಬರಾಜು, ಕೊಳವೆಬಾವಿ ನೀರು ಸರಬರಾಜು ಸೇರಿದಂತೆ ೭೩ ಸಾವಿರ ನೀರು ಸರಬರಾಜು ಸ್ಥಾವರಗಳಿವೆ. ಇದಕ್ಕೆ ರಾಜ್ಯ ಮತ್ತು ಕೇಂದ್ರ ಸರ‍್ಕಾರಗಳು ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿವೆ. ನೌಕರರು ರಜೆ ಪಡೆಯದೇ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಪುನರ್ ವಿಮರ್ಶೆ ಕಮಿಟಿ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿಗೆ ನೀರು ಸರಬರಾಜು ಮಾಡಲು ಪಂಪ್ ಆಪರೇಟರ್ ನೇಮಕ ಮಾಡಿಕೊಳ್ಳುವಂತೆ ೨೦೧೨ರಲ್ಲಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಆದೇಶದಂತೆ ೩೪,೫೮೭ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹಿತದೃಷ್ಟಿಯಿಂದ ಈ ಆದೇಶವನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿದ್ದಾರೆ.

ರಾಜ್ಯ ಅಧ್ಯಕ್ಷ ಮಾರುತಿ ಮಾನ್ಪಡೆ, ಖಜಾಂಚಿ ಶಿವಾನಂದ ಕವಲಗಾ(ಬಿ), ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ ಹರಸೂರ, ಪ್ರಧಾನ ಕಾರ್ಯದರ್ಶಿ ಉಮಾಶಂಕರ ಕಡಣಿ, ಜೈಭೀಮ, ರಾಜಶೇಖರ, ಬೀಮಾಶಂಕರ, ದೇವಿಂದ್ರ, ರೇವಣಸಿದ್ದಪ್ಪ, ಮಹಾಂತೇಶ, ಶಾಂತಯ್ಯ ಸ್ವಾಮಿ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

45 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

47 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

49 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago