ಹೈದರಾಬಾದ್ ಕರ್ನಾಟಕ

ಪೌರಾಯುಕ್ತರಿಂದ ಅನಾವಶ್ಯಕವಾಗಿ ಓಡಾಡುವವರಿಗೆ ಬ್ರೇಕ್

ಶಹಾಬಾದ: ನಗರದಲ್ಲಿ ಬೇಕಾಬಿಟ್ಟಿ ಓಡಾಡುವ ಹಾಗೂ ಮಾಸ್ಕ್ ಧರಿಸದಿರುವವರ ವಿರುದ್ಧ ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ ದಂಡ ವಿಧಿಸುವ ಮೂಲಕ ಅನಾವಶ್ಯಕವಾಗಿ ಓಡಾಡುವವರಿಗೆ ಬ್ರೇಕ್ ಹಾಕಿದ್ದಾರೆ.
ನಗರದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಅದನ್ನು ತಡೆಗಟ್ಟಲು ಸಾಕಷ್ಟು ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿದರೂ ಕೆಲವು ಜನರು ಅನಾವಶ್ಯಕವಾಗಿ ರಸ್ತೆಗೆ ಇಳಿಯುತ್ತಿದ್ದನ್ನು ಗಮನಿಸಿ ಅವರಿಗೆ ದಂಡ ವಿಧಿಸಿದ್ದಾರೆ.ಅಲ್ಲದೇ ಮಾಸ್ಕ್ ಧರಿಸದಿರುವ ಜನಗಳಿಗೆ ಮತ್ತು ಅಂಗಡಿ ಮುಂಗಟ್ಟುಗಳನ್ನು ತೆರೆದಿರುವ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ದಂಡ ಹಾಕಿದ್ದಾರೆ.

ಎರಡು ದಿನಗಳಲ್ಲಿ ಸುಮಾರು 78,000 ಸಾವಿರ ರೂ. ಸಂಗ್ರಹವಾಗಿದೆ.ಅಲ್ಲದೇ ಮಂಗಳವಾರ ಇಡೀ ದಿನ ನಗರದಲ್ಲಿ ಸಂಚಾರ ಮಾಡಿ ಅಂಗಡಿಗಳನ್ನು ತೆರೆಯದಂತೆ ಎಚ್ಚರಿಕೆ ನೀಡಿದ್ದಾರೆ.ನಗರದ ಪ್ರಮುಖ ಸ್ಥಳಗಳಲ್ಲಿ ಸ್ಯಾನಿಟೈಜರ್, ಸೊಂಕಿತ ವ್ಯಕ್ತಿಯ ಪ್ರದೇಶಗಳಲ್ಲಿ ಸ್ವಚ್ಛತೆ ಆದ್ಯತೆ ನೀಡಿದ್ದಾರೆ.ನಗರದ ಪ್ರಮುಖ ರಸ್ತೆಗಳಲ್ಲಿ ನಗರಸಭೆಯ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಿ ಜನರು ಅನಾವಶ್ಯಕವಾಗಿ ತಿರುಗಾಡದಂತೆ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

ತರಕಾರಿ, ಔಷಧ ಹಾಗೂ ಹಾಲು ತರಲು ಬಂದವರು ಅದನ್ನು ತೆಗೆದುಕೊಂಡು ಮನೆಗೆ ಬೇಗ ಹೋಗಿ.ಅದನ್ನು ಬಿಟ್ಟು ಕಿರಾಣಾ, ತರಕಾರಿ ತರುವುದಿದೆ ಎಂದು ಸಬೂಬು ಹೇಳದಿರಿ.ಒಂದು ವೇಳೆ ಅನಾವಶ್ಯಕವಾಗಿ ರಸ್ತೆಗೆ ಬಂದರೆ ದಂಡ ವಿಧಿಸಿ, ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗುವುದೆಂದು ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.

emedia line

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago