ಹೈದರಾಬಾದ್ ಕರ್ನಾಟಕ

ಸಗರ ಪಂಚಾಯಿತಿ ಪಿಡಿಒ ಅಮಾನತಿಗಾಗಿ ಕಕಯುಸೇ ಆಗ್ರಹ

ಶಹಾಪುರ : ಬೇಜವಾಬ್ದಾರಿ ಹಾಗೂ ಗೂಂಡಾ ವರ್ತನೆ ತೋರುತ್ತಿರುವ ಸಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅಮಾನತು ಮಾಡಬೇಕೆಂದು ಕಲ್ಯಾಣ ಕರ್ನಾಟಕ ಯುವ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಭೀಮಾಶಂಕರ ಕಟ್ಟಿಮನಿ ಆಗ್ರಹಿಸಿದ್ದಾರೆ.

ಸಾರ್ವಜನಿಕರೊಂದಿಗೆ ಸ್ಪಂದಿಸುತ್ತಿಲ್ಲ,ಪಂಚಾಯಿತಿಗೆ ಸರಿಯಾಗಿ ಬರುತ್ತಿಲ್ಲ,ಫೋನ್ ಮಾಡಿದರೂ ರಿಸೀವ್ ಮಾಡಲ್ಲ, ಏನಾದರು ಮಾಹಿತಿ ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ.ಅಲ್ಲದೇ ಕಳೆದ ತಿಂಗಳು ವಿಕಲಚೇತನರಿಗೆ ವಿವಿಧ ಸಾಮಗ್ರಿಗಳು ವಿತರಿಸುವಲ್ಲಿ ತಾರತಮ್ಯ ನೀತಿ ಅನುಸರಿಸಿ ತಮಗೆ ಬೇಕಾದವರಿಗೆ ಅಲ್ಲದೆ ಸ್ವಜಾತಿಯವರಿಗೆ ಸಾಮಗ್ರಿಗಳನ್ನು ವಿತರಿಸಿದ್ದಾರೆ ಈ ವಿಷಯ ಕುರಿತು ಯಾವೊಬ್ಬ ಗ್ರಾಮ ಪಂಚಾಯಿತಿ ಪ್ರತಿನಿಧಿಗಳ ಗಮನಕ್ಕೆ ತರದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ.

ಇಂಥ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಲೇಬೇಕು,ಈತನ ಇತಿಹಾಸ ಗಮನಿಸ ಬೇಕಾದರೆ ಇವರು ತಾಲ್ಲೂಕಿನಲ್ಲಿ ಎಲ್ಲೆಲ್ಲಿ ಕೆಲಸ ಮಾಡಿದ್ದಾರೋ ಅಲ್ಲೆಲ್ಲ ಜಗಳವಾಡಿಕೊಂಡು ಹೊಡೆದಾಡಿಕೊಂಡು ಬಡಿದಾಡಿಕೊಂಡು ಬಂದಿದ್ದಾರೆ ಮೊದಲನೆಯದಾಗಿ ಸಂಸ್ಕೃತಿ ಎಂಬುದೇ ಇವರಲ್ಲಿಲ್ಲ ಇಂಥ ಅಧಿಕಾರಿಗಳು ನಮಗೆ ಬೇಕಾಗಿಲ್ಲ,ಇವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು 15 ದಿನಗಳ ಒಳಗಾಗಿ ದಯವಿಟ್ಟು ಅಮಾನತುಗೊಳಿಸಬೇಕು ಇಲ್ಲದಿದ್ದರೆ ವಿವಿಧ ಸಂಘಟನೆಗಳ ಒಕ್ಕೂಟದಲ್ಲಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಸಂಬಂಧಪಟ್ಟ ಅಧಿಕಾರಿಗಳಾದ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಪಿಡಿಯೊ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದರೆ ನನ್ನಿಂದ ಏನು ಮಾಡಲು ಸಾಧ್ಯವಿಲ್ಲ ಇದು ಮೇಲಿನಿಂದಲೇ ಅದೇಶ ಬರಬೇಕು ಅಸಹಾಯಕತೆ ತೋರಿದಾಗ ಇನ್ನು ಸಾಮಾನ್ಯರ ಗತಿ ದೇವರೇ ಬಲ್ಲ ಎಂಬುದು ಜನಸಾಮಾನ್ಯರು ಯೋಚಿಸಬೇಕಾಗಿದೆ. ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಅಧಿಕಾರಿಗಳು ಈ ರೀತಿ ಬೇಜವಾಬ್ದಾರಿ ತೋರಿದರೆ ಅದೆಷ್ಟು ಸರಿ ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಭೀಮಾಶಂಕರ ಕಟ್ಟಿಮನಿ ಅಸಮಾಧಾನ ವ್ಯಕ್ತಪಡಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago