ಶಹಾಪುರ: ತಾಲ್ಲೂಕಿನ ಸೈದಾಪುರ ಗ್ರಾಮದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಸೆಗಣಿ ಎರಚಿ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಆಗ್ರಹಿಸಿದೆ.
ತಹಸೀಲ್ದಾರ ಮುಖಾಂತರ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಸಂಚಾಲಕರಾದ ಮರೆಪ್ಪ ಜಾಲಿಬೆಂಚಿ ಮಾತನಾಡಿ ಇಡೀ ವಿಶ್ವವೇ ಮೆಚ್ಚುವಂತೆ ಮಾದರಿ ಸಂವಿಧಾನವನ್ನು ರಚಿಸಿ ಸಮಾಜದಲ್ಲಿ ಮೇಲು ಕೀಳು ಎನ್ನುವ ಅಸಮಾನತೆ ತೊಡೆದು ಹಾಕಿ ಮಾನವರೆಲ್ಲರೂ ಒಂದೇ ಎನ್ನುವ ಸಂದೇಶವನ್ನು ಸಾರಿದ ಮಹಾಜ್ಞಾನಿ ಭಾರತರತ್ನ ಡಾ: ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಹಾಗೂ ಶಾಂತಿ ಸಹಬಾಳ್ವೆ ಕದಡುವ ಯಾರೇ ಆಗಿರಲಿ ಅಂಥವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಂಡು ಇಂಥ ಹೇಯ ಕೃತ್ಯ ಎಸಗಿದ ಕಿಡಿಗೇಡಿಗಳಿಗೆ ಗಡಿಪಾರು ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಬಸವರಾಜ ಗುಡಿಮನಿ,ಶರಣುರಡ್ಡಿ ಹತ್ತಿಗೂಡೂರ,ರವೀಂದ್ರನಾಥ ಹೊಸ್ಮನಿ,ಭೀಮರಾಯ ಸೈದಾಪುರ,ಗುರುಲಿಂಗಪ್ಪ ಹುರುಸಗುಂಡಗಿ, ಹಣಮಂತ್ರಾಯ ದೊಡ್ಮನಿ, ಸೈದಾಪುರ,ನಿಂಗಣ್ಣ ನಾಟೇಕರ್, ನಾನಾಗೌಡ ಮೇಟಿ, ಚಂದ್ರಶೇಖರ್ ನಾಟೇಕರ್ ಹತ್ತಿಗೂಡೂರು, ಹಾಗೂ ಇತರರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…