ನೇರ ಸಂದರ್ಶನ ಮೂಲಕ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆ ಭರ್ತಿ

ಕಲಬುರಗಿ: ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆ ಹಾಗೂ ಸಮರ್ಪಕ ವೈದ್ಯಕೀಯ ಸೇವೆಯನ್ನು ಒದಗಿಸಲು ಅನುಕೂಲವಾಗುವಂತೆ ಕಲಬುರಗಿ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿಯಿರುವ ಶುಶ್ರೂಷಕರು-53 ಹುದ್ದೆ, ಫಾರ್ಮಾಸಿಸ್ಟ್ 50 ಹುದ್ದೆ ಹಾಗೂ ಲ್ಯಾಬ್ ಟೆಕ್ನಿಷಿಯನ್ 08 ಅರೆ ವೈದ್ಯಕೀಯ ಹುದ್ದೆಗಳನ್ನು ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್-ಇನ್-ಇಂಟರ್ವ್ಯೂವ್ (ನೇರ ಸಂದರ್ಶನ) ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮೇಲ್ಕಂಡ ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಅಥವಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿಯಾಗುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಶುಶ್ರೂಷಕರ ಹುದ್ದೆಗೆ 25,000 ರೂ. ವೇತನ ಹಾಗೂ ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳಿಗೆ ತಲಾ 20,000 ರೂ.ಗಳ ಮಾಸಿಕ ವೇತನ ನೀಡಲಾಗುತ್ತದೆ.
2020ರ ಜುಲೈ 23 ರಂದು ಶುಶ್ರೂಷಕರ ಹುದ್ದೆಗೆ ಹಾಗೂ ಜುಲೈ 24 ರಂದು ಫಾರ್ಮಾಸಿಸ್ಟ್ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಹಿಂದುಗಡೆ ಹೆಚ್.ಐ.ಟಿ ಹಾಲ್ನಲ್ಲಿ ವಾಕ್ಇನ್ಇಂಟರವ್ಯೂವ್ ನಡೆಯಲಿದೆ. ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ಮೂಲ, ಜಿರಾಕ್ಸ್ ಶೈಕ್ಷಣಿಕ ದಾಖಲಾತಿ, ಬಯೋಡಾಟಾ ಹಾಗೂ ಪಾಸ್ಪೋರ್ಟ ಸೈಜಿನ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ನಂತರ ಬಂದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ವಯೋಮಿತಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278618ಗೆ ಸಂಪರ್ಕಿಸಲು ಕೋರಲಾಗಿದೆ
emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

3 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

6 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

10 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

11 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

13 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420