ಶಹಾಬಾದ: ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಸಿಎ ಇಂಗಿನಶೆಟ್ಟಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ, 22ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಐನಾನ ಸಫಾ ಶೇ.89 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ, ಭವಾನಿ ಶೇ. 87 ಅಂಕ ಪಡೆದು ದ್ವಿತೀಯ ಸ್ಥಾನ, ಅಲಫಿಯಾ ಅಫಶಿನ್ ಶೇ.83 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಅಲ್ಲದೇ ಮಹಮ್ಮದ್ ಸೂಫೀಯಾನ ಶೇ 83, ಅಸಮಾರ ಮಹಾವಿಯಾ ಶೇ 82.3 ಅಂಕವನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ವಾಣಿಜ್ಯ ವಿಭಾಗ: ರಾಜಶ್ರೀ ಶೇ.81.17 ಅಂಕ ಪಡೆದು ಕಾಲೇಜಿಗೆ ಪ್ರಥಮ, ಶೃತಿ ಶೇ. 81.67 ಅಂಕ ಪಡೆದು ದ್ವಿತೀಯ ಹಾಗೂ ನಿಧಾ ನಾಜ್ಶೇ.72 ಅಂಕ ಪಡೆದು ತೃತೀಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ಸಾಧನೆ ಮಾಡಿದ ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಬಾಲಕಿಶನ್ ವರ್ಮಾ, ಉಪಾಧ್ಯಕ್ಷ ಹಣಮಂತರಾವ ಇಂಗಿನಶೆಟ್ಟಿ, ಕಾರ್ಯದರ್ಶಿ ದಿಲೀಪ ಯಲಶೆಟ್ಟಿ, ಆಡಳಿತ ಮಂಡಳಿ,ಪ್ರಾಚಾರ್ಯ ರಾಜಗೋಪಾಲ ಜೂಜಾರೆ ಉಪನ್ಯಾಸ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…