ಬಿಸಿ ಬಿಸಿ ಸುದ್ದಿ

ಕಲಬುರಗಿ ಜಿಮ್ಸ್ ಆಸ್ಪತ್ರೆ ಆವರಣದಿಂದ ಹಂದಿಗಳ ಸ್ಥಳಾಂತರಕ್ಕೆ ಡಿ.ಸಿ. ಸೂಚನೆ

ಕಲಬುರಗಿ: ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಹಂದಿಗಳ ಕಾಟದ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರಗೊಂಡ ಹಿನ್ನೆಲೆಯಲ್ಲಿ ಶನಿವಾರ ಆಸ್ಪತ್ರೆಗೆ ದಿಢೀರ ಭೇಟಿ ನೀಡಿದ ಜಿಲ್ಲಾಧಿಕಾರಿ ಶರತ್ ಬಿ. ಅವರು ಸ್ಥಳದಲ್ಲಿದ್ದ ಹಂದಿ ಮಾಲೀಕನಿಗೆ ಕೂಡಲೆ ಆಸ್ಪತ್ರೆ ಆವರಣದಲ್ಲಿರುವ ಎಲ್ಲಾ ಹಂದಿಗಳನ್ನು ಸ್ಥಳಾಂತರಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಡಿ.ಸಿ.ಭೇಟಿ ನೀಡಿದ ಸಂದರ್ಭದಲ್ಲಿಯೆ ಹಂದಿ ಮಾಲೀಕರು ಮತ್ತು ಅವರ ತಂಡ ಸುಮಾರು 50 ಹಂದಿಗಳನ್ನು ಹಿಡಿದು ಸ್ಥಳಾಂತರಕ್ಕೆ ಕ್ರಮ ಕೈಗೊಂಡರು. ಇನ್ನೂ ಅಂದಾಜು 150 ಹಂದಿಗಳಿದ್ದು, ಸಾಯಂಕಾಲದೊಳಗೆ ಎಲ್ಲವು ಸ್ಥಳಾಂತರಿಸವುದಾಗಿ ಹೇಳಿದರು.

ಆಸ್ಪತ್ರೆ ಆವರಣದಲ್ಲಿ ಹಂದಿಗಳಿದ್ದರು ಇದರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳದ ಜಿಮ್ಸ್ ಅಧಿಕಾರಿಗಳ ಕಾರ್ಯಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆ ಸುತ್ತಮುತ್ತ ಸ್ವಚ್ಛತೆ, ಗುಣಮಟ್ಟದ ಪರಿಸರ ಕಾಪಾಡುವುದು ಆಸ್ಪತ್ರೆಯ ಜವಾಬ್ದಾರಿಯಾಗಿದೆ. ದಿನನಿತ್ಯ ಸಾವಿರಾರು ರೋಗಿಗಳು ಆಸ್ಪತ್ರೆಗೆ ಭೇಟಿ ನಿಡುತ್ತಾರೆ. ಹೀಗಾಗಿ ಇಲ್ಲಿ ಆರೋಗ್ಯ ನೈರ್ಮಲ್ಯ ಕಾಪಾಡುವತ್ತ ಹೆಚ್ಚಿನ ಗಮನಹರಿಸಬೇಕು ಎಂದರು.

ಸಾರ್ವಜನಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಆಸ್ಪತ್ರೆ ಆವರಣದಲ್ಲಿ ಹಂದಿ ಸಾಕಾಣಿಕೆ ಸಹಿಸುವುದಿಲ್ಲ. ಇಲ್ಲಿ ಹಂದಿ ಸಾಕಾಣಿಕೆಗೆ ಬಿಟ್ಟಿರುವ ಮಾಲೀಕನ ಮೇಲೆ ಕೂಡಲೆ ಎಫ್.ಐ.ಆರ್. ದಾಖಲಿಸುವಂತೆ ಜಿಮ್ಸ್ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆ ಸುತ್ತಮುತ್ತ ಗೋಡೆಗಳ ಭದ್ರತೆ ಪರಿಶೀಲಿಸಿ ಹಂದಿಗಳು ಬರಲು ಸಣ್ಣ-ಪುಟ್ಟ ದಾರಿಗಳಿದ್ದಲ್ಲಿ ಎಲ್ಲವನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡುವಂತೆ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ಅವರಿಗೆ ಸೂಚಿಸಿದರು.

ಭದ್ರತಾ ಸಿಬ್ಬಂದಿ ಮೇಲೆ ಗರಂ: ಆಸ್ಪತ್ರೆ ಕಾವಲಿಗೆ ಇರುವ ಭದ್ರತಾ ಸಿಬ್ಬಂದಿಗಳ ಮೇಲೆ ಜಿಲ್ಲಾಧಿಕಾರಿಗಳು ಗರಂ ಆದರು. ಆಸ್ಪತ್ರೆ ಸಂಪೂರ್ಣ ಆವರಣದ ಮೇಲೆ ನಿಮ್ಮ ಕಣ್ಗಾವಲು ಇರಬೇಕು. ಮುಂದೆ ಈ ರೀತಿ ಆಸ್ಪತ್ರೆ ಆವರಣದಲ್ಲಿ ಹಂದಿಗಳ ಸಾಕಾಣಿಕೆಯಾಗಲಿ ಅಥವಾ ಹೋಟೆಲ್‍ಗಳಿಂದ ತ್ಯಾಜ್ಯ ಆಹಾರವಾಗಲಿ ಆವರಣದಲ್ಲಿ ಇರದಂತೆ ನಿಗಾ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ.ಶಫಿಯೂದ್ದಿನ್, ಜಿಲ್ಲಾ ಆಸ್ಪತ್ರೆಯ ಶಸ್ತ್ರಜ್ಞ ಹಾಗೂ ಅಧೀಕ್ಷಕ ಡಾ.ಅಂಬಾರಾಯ ರುದ್ರವಾಡಿ, ಪಾಲಿಕೆಯ ಆರೋಗ್ಯ ನಿರೀಕ್ಷಕ ಧನರಾಜ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

15 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago