ಕಲಬುರಗಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದ್ದು, ಅದರಂತೆ ಶನಜವಾರ ಬ್ಯಾರೇಜಿನಿಂದ 4000 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಹರಿಸಲಾಗಿದೆ ಎಂದು ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ.
ಬ್ಯಾರೇಜಿಗೆ ಒಳಹರಿವಿನ ನೀರಿನ ಪ್ರಮಾಣ 4000 ಕ್ಯೂಸೆಕ್ಸ್ ಇದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಬಿಡಲಾಗುತ್ತಿದೆ. ಆದರಿಂದ ನದಿ ಡಂಡೆಯಲ್ಲಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರದೇಶದ ರೈತರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ.ಎಂ.ಸಿ. ಇದ್ದು, ಶನಿವಾರ ಬೆಳಿಗ್ಗೆ 2.74 ಟಿ.ಎಂ.ಸಿ. ನೀರು ಸಂಗ್ರಹಣಗೊಂಡಿದೆ ಎಂದರು.
ಜುಲೈ ಮಾಸಾಂತ್ಯ ಮತ್ತು ಆಗಸ್ಟ್ ಮಾಹೆಯಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದ್ದು, ಆಗ ನೀರಿನ ಒಳಹರಿವು ಇನ್ನು ಹೆಚ್ಚಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು 4000 ಕ್ಯೂಸೆಕ್ಸ್ ನೀರು ನದಿಗೆ ಹರಿಸಲಾಗಿದೆ ಎಂದು ಅಶೋಕ ಆರ್. ಕಲಾಲ್ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…