ಕೋಲಾರ: ತಮ್ಮನಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮನನೊಂದು ಅಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಂಧಿನಗರದ ಗಲ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಾಂಧಿನಗರ ನಿವಾಸಿಯಾದ ನಾಗರಾಜ್ (37) ಆತ್ಮಹತ್ಯೆಗೆ ಶರಣಾಧ ವ್ಯಕ್ತಿ. ತಮ್ಮನಿಗೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ನಾಗರಾಜ್ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸ್ವಲ್ಪ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದಾನೆ ಎಂದು ತಿಳಿದುಬಂದಿದೆ.
ಅಣ್ಣ ಹಾಗೂ ಕುಟುಂಬಸ್ಥರಿಗೂ ಕೊರೊನಾ ತಗುಲಿರುವ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಗಲ್ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.