ಬೆಂಗಳೂರು: ತನ್ನನ್ನು ತಾನು ಡ್ರೋನ್ ತಯಾರಿಸಿದ್ದಾಗಿ ಸುಳ್ಳು ಹೇಳಿಕೊಂಡು ಈಗ ಸಿಕ್ಕಿಬಿದ್ದಿರುವ ಪ್ರತಾಪ ಈಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾನೆ. ಈ ಬಾರಿ ಪ್ರಕರಣ ದಾಖಲಾಗಿರುವುದು ಡ್ರೋನ್ ವಿಚಾರಕ್ಕೆ ಅಲ್ಲ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣ. ಹೀಗಾಗಿ ಪ್ರತಾಪನ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸರು ಪ್ರತಾಪನ ಬಂಧನಕ್ಕೆ ವಿಶೇಷ ತಂಡವೊಂದನ್ನು ರಚಿಸಿ, ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
15ರಂದು ಪ್ರತಾಪ ಹೈದರಾಬಾದ್ ನಿಂದ ಬೆಂಗಳೂರಿಗೆ ಬಂದಿದ್ದು, ಹೊರ ರಾಜ್ಯದಿಂದ ಬಂದ ತಲಘಟ್ಟಪುರದ ಅಪಾರ್ಟ್ ಮೆಂಟ್ ವೊಂದರಲ್ಲಿ 14 ದಿನ ಹೋಂ ಕ್ವಾರಂಟೈನ್ ಆಗಬೇಕಾಗಿತ್ತು, ಆದರೆ ಮರುದಿವಸ ನಿಯಮ ಉಲ್ಲಂಘಿಸಿ ಚಾನೆಲ್ ಒಂದರ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ಕಾರಣ ಬಿಬಿಎಂಪಿ ಅಧಿಕಾರಿಗಳು ತಲಘಟ್ಟಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರತಾಪ ಮೊಬೈಲ್ ಸ್ವಿಚ್ ಆಫ್ ಎಂದು ಬರುತ್ತಿದ್ದು, ಆತನಿಗೆ ಹೋಂ ಕ್ವಾರಂಟೈನ್ ಮಾಡಿದ ಅಪಾರ್ಟ್ ಮೆಂಟ್ ಗೆ ಭೇಟಿ ನೀಡಿದಾಗಲೂ ಆತ ಅಲ್ಲೂ ಸಹ ಪತ್ತೆಯಾಗಿರಲಿಲ್ಲ. ಸದ್ಯ ಮಂಡ್ಯ ಅಥವಾ ಚಿಕ್ಕಮಗಳೂರಿನಲ್ಲಿ ಇದ್ದಾನೆ ಎನ್ನಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…