ವಾಡಿ: ಗೌರವಧನ ಹೆಚ್ಚಳಕ್ಕಾಗಿ ಆಗ್ರಹಿಸಿ ಕಳೆದ ಹನ್ನೊಂದು ದಿನಗಳಿಂದ ಆಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಕರೆಕೊಟ್ಟು ಹೋರಾಟದಲ್ಲಿದ್ದಾರೆ. ಕೊರೊನಾ ವಾರಿಯರ್ಸ್‌ಗಳ ಕೂಗು ಕೇಳಿಸಿಕೊಳ್ಳದ ಸರಕಾರದ ವಿರುದ್ಧ ಉಗ್ರ ಹೋರಾಟ ಭುಗಿಲೇಳಲಿದೆ ಎಂದು ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಜಂಟಿ ಕಾರ್ಯದರ್ಶಿ ಶರಣು ಹೇರೂರ ಹೇಳಿದರು.
ಗೌರವಧನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗಳಿಗಾಗಿ ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಜು.೧೦ ರಿಂದ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಕಾಲ ಮುಷ್ಕರಕ್ಕೆ ಕರೆ ನೀಡಿರುವ ಆಶಾ ಕಾರ್ಯಕರ್ತೆಯರ ಹೋರಾಟ ಮುಂದುವರೆಸುವ ಕುರಿತು ವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರೆಯಲಾದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಒಟ್ಟು ೪೨೦೦೦ ಆಶಾ ಕಾರ್ಯಕರ್ತೆಯರು ರೂ.೧೨೦೦೦ ಗೌರವಧನ ಹೆಚ್ಚಳಕ್ಕಾಗಿ ಹೋರಾಡುತ್ತಿದ್ದಾರೆ. ಮುಷ್ಕರ ಹನ್ನೊಂದನೇ ದಿನಕ್ಕೆ ಕಾಲಿಟ್ಟರೂ ಕಿವುಡ ಸರಕಾರ ಕ್ಯಾರೆ ಎನ್ನುತ್ತಿಲ್ಲ. ಹಗಲೂ ರಾತ್ರಿ ಸೋಂಕಿತರ ಮಧ್ಯೆ ಕರ್ತವ್ಯ ನಿರ್ವಹಿಸಿದ ಕೊರೊನಾ ವಾರಿಯರ್ಸ್‌ಗಳ ಸೇವೆಯನ್ನು ಸರಕಾರ ಹಗುರವಾಗಿ ಕಂಡಿದೆ ಎಂದು ದೂರಿದರು. ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ನೀಡುತ್ತಿರುವ ಗೌರವಧನ ಮತ್ತು ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಲು ಆಶಾಗಳು ಸಾಕಷ್ಟು ಹರಸಾಹಸ ಪಡಬೇಕಿದೆ. ಈ ಎರಡೂ ಗೌರವಧನಗಳನ್ನು ಒಟ್ಟುಗೂಡಿಸಿ ಮಾಸಿಕ ರೂ.೧೨೦೦೦ ನಿಶ್ಚಿತ ಗೌರವಧನ ನಿಗದಿಪಡಿಸಬೇಕು ಹಾಗೂ ಆರೋಗ್ಯ ರಕ್ಷಣೆಗೆ ರಕ್ಷಾಕವಚ ಒದಗಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ರೈತರು, ಪ್ರಗತಿಪರ ಚಿಂತಕರು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ಮಹಿಳೆಯರು, ಕಾರ್ಮಿಕರು, ಬುದ್ದಿಜೀವಿಗಳು ನಮ್ಮ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ ಎಂದರು.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಚಿತ್ತಾಪುರ ತಾಲೂಕು ಕಾರ್ಯದರ್ಶಿ ಸಾವಿತ್ರಿ ಬೆಟಗೇರಿ ಮಾತನಾಡಿ, ಸರ್ಕಾರ ನಮ್ಮ ಕಷ್ಟದ ಕೂಗು ಕೇಳಿಸಿಕೊಳ್ಳದಿದ್ರೆ ಕುಟುಂಬ ಸಮೇತ ರಾಜ್ಯದಾದ್ಯಂತ ನಮ್ಮೂರ ಪಂಚಾಯತಿಗಳ ಮುಂದೆ ಧರಣಿ ಆರಂಭಿಸುತ್ತೇವೆ. ಜೀವದ ಹಂಗು ತೊರೆದು ಕೊರೊನಾ ಹೋರಾಟದಲ್ಲಿ ತೊಡಗಿರುವ ನಮಗೆ ನ್ಯಾಯ ಸಿಗುವ ವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಗುಡುಗಿದರು.
ಆಶಾ ಕಾರ್ಯಕರ್ತೆಯರಾದ ಮಂಜುಳಾ ಚಾಮನೂರ, ವಿಜುಬಾಯಿ ರಾಠೋಡ, ರತ್ನಮ್ಮ ಕಟ್ಟಿಮನಿ, ಸಾವಿತ್ರಿ ಹಂಗರಗಿ, ರೇಣುಕಾ ಕಟ್ಟಿಮನಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…