ಅಮೇಥಿ: ಅಮೇಥಿಯ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರ ಅಪ್ತರೊಬ್ಬರ ಮೇಲೆ ಅಪರಿಚಿತರಿಂದ ಶೂಟೌಟ್ ಮಾಡಿ ಕೊಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಸುರೇಂದರ್ ಸಿಂಗ್ ಕೊಲೆಯಾದ ವ್ಯಕ್ತಿ. ಬರೌಲಿಯಾ ಗ್ರಾಮದ ಮಾಜಿ ಅಧ್ಯಕ್ಷರಾಗಿದರು ಎನ್ನಲಾಗಿದ್ದು, ಅಪರಿಚಿತ ವ್ಯಕ್ತಿಗಳು ನಿನ್ನೆ ರಾತ್ರಿ ಅವರ ಮನೆಗೆ ನುಗ್ಗಿ ಏಕಾಏಕಿ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಸುರೇಂದರ್ ಅವರನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.