ಕಲಬುರಗಿ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಬಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚೌಹಾಣ್ ಅವರು ನಗರದ ಗಣೇಶ ಮಂದಿರದಿಂದ ಸುಪರ್ ಮಾರ್ಕೆಟ್ ವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ನಗರ ಜಿಲ್ಲಾದ್ಯಕ್ಷ ಬಿ.ಜಿ. ಪಾಟೀಲ, ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ, ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಸೇರಿದಂತೆ ಬಿಜೆಪಿಯ ರಾಜ್ಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.
ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಮಾತ್ರ ದೇಶದ ಸುಭದ್ರತೆ ಸಾಧ್ಯವಿದ್ದು, ಬಿಜೆಪಿಗೆ ಮತ ಹಾಕುವಂತೆ ಚೌಹಾಣ ಮನವಿ ಮಾಡಿದರು.