ಕಲಬುರಗಿ: ಕೊರೋನಾ ಸೋಂಕಿನಿಂದ ಮತ್ತೆ ಕಲಬುರಗಿ ಮತ್ತು ಬೀದರ ಜಿಲ್ಲೆಯ ತಲಾ ಓರ್ವರು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬೀದರ ಜಿಲ್ಲೆಯ 57 ವರ್ಷದ ಮಹಿಳೆ (P-21336) ಜು.3 ರಂದು ಆಸ್ಪತ್ರೆಗೆ ದಾಖಲಾಗಿ ಜು.7 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯ ಕಲಬುರಗಿ ನಗರದ ಬ್ಯಾಂಕ್ ಕಾಲೋನಿ (ಏಶನ್ ಮಾಲ್ ಹಿಂದುಗಡೆ) ಪ್ರದೇಶದ 40 ವರ್ಷದ ಪುರುಷ (P-36931) ಜು.12 ರಂದು ಆಸ್ಪತ್ರೆಗೆ ದಾಖಲಾಗಿ ಜು.15 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.