ಪ್ರತಿಯೊಬ್ಬರಿಗೂ ಯೋಜನೆಯ ಫಲ ದೊರಕಲಿ: ಶಾಸಕ ಗುತ್ತೇದಾರ

0
277

ಆಳಂದ: ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತಾಗಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ಮಂಗಳವಾರ ಆಳಂದ ತಾಲೂಕಿನ ಧುತ್ತರಗಾಂವ ಗ್ರಾಮದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಆಯ್ಕೆ ಮಾಡಿದ ಫಲಾನುಭವಿಗಳಿಗೆ ವಿವಿಧ ಸಾಧನ, ಸಲಕರಣೆಗಳನ್ನು ವಿತರಿಸಿ ಮಾತನಾಡಿದರು. ಜನರ ಜೀವನ ಮಟ್ಟ ಸುಧಾರಿಸಲು, ಅವರ ಆರ್ಥಿಕ ಸ್ಥಿತಿಯನ್ನು ಮೇಲಕ್ಕೆ ಎತ್ತಲು ಸರ್ಕಾರವು ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದರ ಫಲ ಜನತೆ ಪಡೆದಾಗ ಮಾತ್ರ ಸರ್ಕಾರದ ಕಾರ್ಯ ಸಾರ್ಥಕವಾಗುತ್ತದೆ ಎಂದು ನುಡಿದರು.

Contact Your\'s Advertisement; 9902492681

ಗ್ರಾಮೀಣ ಭಾಗದ ಯುವಕರು ಸ್ವಯಂ ಉದ್ಯೋಗಕ್ಕೆ ಒತ್ತು ನೀಡಬೇಕು ಅದಕ್ಕಾಗಿ ಬೇಕಾಗಿರುವ ಕೌಶಲ್ಯಗಳನ್ನು ಸಂಪಾದಿಸಬೇಕು ಜೊತೆಗೆ ಅರ್ಹ ವಿದ್ಯಾವಂತ ತರುಣರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಿ ಹುಟ್ಟೂರಿಗೆ ಮತ್ತು ತಾಲೂಕಿಗೆ ಕೀರ್ತಿ ತರುವಂತಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ೨೮ ಅಂಗವಿಕಲ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಪಠ್ಯ ಸಾಮಗ್ರಿಗಳನ್ನು ಸುಮಾರು ೧.೨೫ ಲಕ್ಷ. ರೂ ವೆಚ್ಚದ ಸಲಕರಣೆಗಳನ್ನು ವಿತರಿಸಲಾಯಿತು.

ಮುಖಂಡರಾದ ವೀರಣ್ಣ ಮಂಗಾಣೆ, ಚಂದ್ರಕಾಂತ ಮಂಗಾಣೆ, ಶಿವಾನಂದ ಪಾಟೀಲ, ಪ್ರಭುಲಿಂಗ ಹುಲಿ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here