ಕಲಬುರಗಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಭಕ್ತಾದಿಗಳ ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ 2020ರ ಆಗಸ್ಟ್ 10 ರಂದು ನಿಗದಿಯಾಗಿದ್ದ ಜಿಲ್ಲೆಯ ಕಾಳಗಿ ತಾಲೂಕಿನ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ದೇವಸ್ಥಾನದ ಅಡಳಿತಾಧಿಕಾರಿ ಹಾಗೂ ಸೇಡಂ ಸಹಾಯಕ ಆಯುಕ್ತ ರಮೇಶ ಕೋಲಾರ ತಿಳಿಸಿದ್ದಾರೆ.
ಅಂದು ಜಾತ್ರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ದೇವಸ್ಥಾನದ ಸಿಬ್ಬಂದಿ ಮತ್ತು ಅರ್ಚಕರಿಂದ ನೆರವೇರಿಸಲಾಗುತ್ತದೆ. ಹೀಗಾಗಿ ಸಾರ್ವಜನಿಕರು ಮತ್ತು ಭಕ್ತಾಧಿಗಳು ಜಾತ್ರಾ ಮಹೋತ್ಸವಕ್ಕೆ ಯಾರು ಬರಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಇದಲ್ಲದೆ ಶ್ರಾವಣ ಮಾಸ ಆರಂಭವಾಗಿದ್ದು, ಮಾಸದ ಪ್ರತಿ ಸೋಮವಾರ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಸಾಂಪ್ರಾದಾಯಿಕ ಕೈಂಕರ್ಯಗಳು ದೇವಸ್ಥಾನದ ಅರ್ಚಕರಿಂದ ನಡೆಯಲಿದ್ದು, ದೇವಸ್ಥಾನಕ್ಕೆ ಅರ್ಚಕರಲ್ಲದೆ ಬೇರೆ ಭಕ್ತಾಧಿಗಳಿಗೆ ಪ್ರವೇಶ ನಿಷೇಧವಿರುತ್ತದೆ. ಸಾರ್ವಜನಿಕರು ಮತ್ತು ಭಕ್ತಾಧಿಗಳು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದಾರೆ.