ಪೊಲೀಸ್ ಸಿಬ್ಬಂದಿಗಳಿಗೆ ರಾಪಿಡ್  ಪರೀಕ್ಷೆ- ಇಬ್ಬರಿಗೆ ಸೊಂಕು ದೃಢ

0
43

ಶಹಾಬಾದ:ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ರಾಪಿಡ್  ಪರೀಕ್ಷೆ ನಡೆಸಿದ ನಂತರ ಇಬ್ಬರಿಗೆ ಮಾತ್ರ ಕರೊನಾ ಸೊಂಕು ಇರುವ ಬಗ್ಗೆ ದೃಢಪಟ್ಟಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.ಮಂಗಳವಾರದಂದು ಠಾಣೆಯ ಒಟ್ಟು 44 ಸಿಬ್ಬಂದಿಗಳಿಗೆ ರಾಪಿಡ್ ಪರೀಕ್ಷೆಗೆ ಒಳಪಡಿಸಿದ್ದಾರೆ.ಅಲ್ಲದೇ ಸಂಜೆ ಪರೀಕ್ಷೆಯ ವರದಿಯಲ್ಲಿ ಇಬ್ಬರಿಗೆ ಮಾತ್ರ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಇವರನ್ನು ಹೆಚ್ಚಿನ ಚಿಕಿತ್ಸೆಗೆ ಕಳಿಸಿಕೊಡಲಾಗಿದೆ. ಒಂದು ದಿನದ ಹಿಂದಷ್ಟೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯೊರ್ವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ಎಲ್ಲಾ ಸಿಬ್ಬಂದಿಗಳು ಆತಂಕದಲ್ಲಿದ್ದರು. ಅಲ್ಲದೇ ಸೊಂಕಿತ ಪೊಲೀಸ್ ಸಿಬ್ಬಂದಿಯೊಂದಿಗೆ ಬಹುತೇಖ ಎಲ್ಲಾ ಜನರು ಸಂಪರ್ಕದಲ್ಲಿದ್ದರಿಂದ ಭಯಭೀತರಾಗಿ ಎಲ್ಲಾ ಸಿಬ್ಬಂದಿಗಳನ್ನು ರಾಪಿಡ್ ಪರೀಕ್ಷೆಗೆ ಒಳಪಡಿಸಬೇಕೆಂದು ಪೊಲೀಸರ ಆಗ್ರಹಿಸುತ್ತಿದ್ದರು.ತಕ್ಷಣವೇ ತಹಸೀಲ್ದಾರ ಅವರು ಭಯದ ವಾತಾವರಣದಲ್ಲಿ ಮುಳುಗಿದ್ದ ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಪರೀಕ್ಷೆಗ ಒಳಪಡಿಸಿದ್ದಾರೆ. ಅದರಲ್ಲಿ ಇಬ್ಬರಿಗೆ ಮಾತ್ರ ಮಾತ್ರ ಕೊರೊನಾ ಇರುವುದು ದೃಢಪಟ್ಟಿದೆ. ಉಳಿದ ಪೊಲೀಸರು ನಿರಾಳರಾಗಿದ್ದಾರೆ. ಸದ್ಯ ಪೊಲೀಸ್ ಠಾಣೆಯನ್ನು ಮತ್ತೊಮ್ಮೆ ಸಂಪೂರ್ಣ ಸ್ಯಾನಿಟೈಜರ್ ಮಾಡಲಾಗಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here