ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

0
66

ಕಲಬುರಗಿ: ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲಗಳಾದ ಭೀಮಾ, ಬೆಣ್ಣೆತೋರಾ ಮತ್ತು ಭೋಸಗಾ ನದಿಗಳ ಮೇಲ್ಭಾಗದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ನದಿಗೆ ಪ್ರವಾಹ ಬಂದಿರುವುದರಿಂದ ಪ್ರವಾಹದ ನೀರಿನಲ್ಲಿ ಮಣ್ಣಿನ ಅಂಶ ಹೆಚ್ಚಾಗಿರುತ್ತದೆ. ಜಲ ಮಂಡಳಿಯು ನೀರನ್ನು ಶುದ್ಧೀಕರಿಸಿ, ಸುಪರ್ ಕ್ಲೋರಿನೇಶನ್ ಮಾಡಿ ನಗರಕ್ಕೆ ನೀರು ಸರಬರಾಜು ಮಾಡುತ್ತಿದೆ. ಆದ್ಯಾಗೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ ಆರಿಸಿ ಸೋಸಿ ಕುಡಿಯಬೇಕೆಂದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಲಬುರಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಇದಲ್ಲದೇ ಕಲಬುರಗಿ ನಗರಕ್ಕೆ ನಿಗದಿತ ದಿನ ಮತ್ತು ಸಮಯದಂದು ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ತಮ್ಮ ಮನೆಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಗಳನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು ಮತ್ತು ನಳದ ತಗ್ಗುಗಳನ್ನು ಮುಚ್ಚಬೇಕು. ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯ ಮುಖಾಂತರ ಗ್ರಾಹಕರಿಗೆ ತಲುಪುತ್ತದೆ. ಇದರಿಂದ ರೋಗ ರುಜ್ಜೀನ ಬರುವ ಸಂಭವವಿರುತ್ತದೆ.

Contact Your\'s Advertisement; 9902492681

ಆದ್ದರಿಂದ ಸಾರ್ವಜನಿಕರು ತಮ್ಮ ನಳದ ಜೋಡಣೆಯ ಪೈಪುಗಳಲ್ಲಿ ಸೋರುವಿಕೆ ಅಥವಾ ಒಡೆದು ಹೊದಲ್ಲಿ, ತಕ್ಷಣ ದುರಸ್ತಿ ಮಾಡಿಕೊಳ್ಳಬೇಕು. ದುರಸ್ತಿ ಮಾಡಿಕೊಳ್ಳದಿದ್ದಲ್ಲಿ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಇರುತ್ತದೆ. ಸಾರ್ವಜನಿಕರು ತಮ್ಮ ನಳಗಳಿಗೆ ತೊಟ್ಟಿಗಳನ್ನು ಅಳವಡಿಸಿ ನೀರು ಪೋಲಾಗದಂತೆ ನೊಡಿಕೊಳ್ಳಬೇಕು. ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here