ಸುರಪುರ: ದೇಶದಲ್ಲಿ ಕೊರೊನಾ ಮಹಾಮಾರಿ ತಾಂಡವವಾಡುತ್ತಿದೆ.ಇದರಿಂದ ಇಡೀ ಜನತೆ ತೀವ್ರ ಸಂಕಷ್ಟ ಹೆದರಿಸುವಂತಾಗಿದೆ.ಇಂತಹ ಸಂದರ್ಭದಲ್ಲಿ ಕೋವಿಡ್ ಚಿಕಿತ್ಸೆಗೆ ಜನರು ಹಣ ಕೊಡುವ ಪರಸ್ಥಿತಿಯಲ್ಲಿಲ್ಲ ಆದ್ದರಿಂದ ಉಚಿತವಾಗಿ ಚಿಕಿತ್ಸೆ ನೀಡಬೇಕೆಂದು ಕೃಷಿ ಕೂಲಿಕಾರರ ಸಂಘದ ಜಿಲ್ಲಧ್ಯಕ್ಷ ದವಲಸಾಬ್ ನದಾಫ್ ಮಾತನಾಡಿದರು.
ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿ,ಕೋವಿಡ್ ಮಹಾಮಾರಿಗೆ ಜನರು ನಲುಗಿದ್ದಾರೆ ಇಂತಹ ಸಂದರ್ಭದಲ್ಲಿ ಸರಕಾರಗಳು ಜನರ ನೆರವಿಗೆ ಬರಬೇಕಿದೆ.ಪ್ರತಿ ವ್ಯಕ್ತಿಗೆ ತಿಂಗಳಿಗೆ ಕನಿಷ್ಟ ೧೦ ಕೆ.ಜಿ ಅಕ್ಕಿ ನೀಡಬೇಕು.ಪ್ರತಿ ಕುಟುಂಬಕ್ಕೆ ಮಾಸಿಕ ೭೫೦೦ ಪರಿಹಾರ ಧನ ನೀಡಬೇಕು.ಪ್ರತಿಯೊಬ್ಬರಿಗು ಉದ್ಯೋಗ ಖಾತ್ರಿಯಡಿ ಕೆಲಸ ನೀಡಬೇಕು.ವಿದ್ಯಾವಂತ ನಿರುದ್ಯೋಗಿ ವ್ಯಕ್ತಿಗಳಿಗೆ ಮಾಸಿಕ ೧೦ ಸಾವಿರ ಗೌರವಧನ ನೀಡಬೇಕು.ಭೂ ಸುಧಾರಣಾ ಕಾಯಿದೆಗಳ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಸಿದರು.
ನಂತರ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ್ ಮಾತನಾಡಿ, ಸರಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ರೈತರನ್ನು ಒಕ್ಕಲೆಬ್ಬಿಸಲು ನಿಂತಿದೆ ಇದನ್ನು ನಿಲ್ಲಿಸಬೇಕು.ಅಲ್ಲದೆ ತಾಲೂಕಿನ ಅನೇಕ ಗ್ರಾಮಗಳಲ್ಲಿನ ಕಾರ್ಮಿಕರಿಗೆ ಉದ್ಯೋಗ ಖಾತ್ರಿಯ ಕೂಲಿ ಹಣ ನೀಡಬೇಕಿದೆ.ಅವುಗಳನ್ನು ಬಿಡುಗಡೆ ಮಾಡಬೇಕು ಮತ್ತು ಅನೇಕ ಕಾರ್ಮಿಕರಿಗೆ ಉದ್ಯೋಗ ನೀಡಿಲ್ಲ,ಅನೇಕರಿಗೆ ಜಾಬ್ ಕಾರ್ಡ್ ನೀಡಿಲ್ಲ ಇಂತಹ ಎಲ್ಲಾ ಸಮಸ್ಯಗಳನ್ನು ನಿವಾರಿಸುವಂತೆ ಆಗ್ರಹಿಸಿದರು.
ನಂತರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಶರಣಪ್ಪ ಅನಸೂಗುರು,ರಾಜು ದೊಡ್ಮನಿ,ರಫೀಕ ಸುರಪುರ,ಖಾಜೆಸಾಬ್ ದಳಪತಿ,ಮೈನೊದ್ದೀನ್ ದೇವಾಪುರ,ಲಾಲಸಾಬ್ ಮಂಗಳೂರು,ಶರಣಬಸವ ಜಂಬಲದಿನ್ನಿ,ವಿರೇಶ ,ಅಯ್ಯಪ್ಪ ಅನ್ಸೂರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…