ಬಿಸಿ ಬಿಸಿ ಸುದ್ದಿ

ವೈಚಾರಿಕತೆಯುಕ್ತ ಹಬ್ಬದ ಆಚರಣೆ ಇಂದಿನ ಅಗತ್ಯ: ಪೂಜ್ಯ ಶಿವಾನಂದ ಮಹಾಸ್ವಾಮೀಜಿ

ಕಲಬುರಗಿ: ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳವಣಿಗೆ ಆಗಿದ್ದರೂ ಕೂಡಾ, ಇಂದಿಗೂ ಅನೇಕ ಮೂಢನಂಬಿಕೆ ಕಂಡು ಬರುತ್ತಿರುವುದು ತುಂಬಾ ವಿಷಾದನೀಯ ಸಂಗತಿಯಾಗಿದೆ. ಪ್ರತಿಯೊಬ್ಬರು ಇಂತಹ ಮೂಢ ನಂಬಿಕೆಯಿಂದ ಹೊರಬಂದು, ವೈಜ್ಞಾನಿಕ, ವೈಚಾರಿಕವಾದ ಮನೋಭಾವನೆಯೊಂದಿಗೆ ಹಬ್ಬ, ಉತ್ಸವಗಳನ್ನು ಆಚರಿಸುವುದು ಇಂದಿನ ಅಗತ್ಯವಾಗಿದೆಯೆಂದು ಮಕ್ತಂಪುರ ಗುರುಬಸವ ಮಠದ ಪರಮ ಪೂಜ್ಯ ಶಿವಾನಂದ ಮಹಾಸ್ವಾಮೀಜಿ ತಮ್ಮ ಅಭಿಮತ ವ್ಯಕ್ತಪಡಿಸಿದರು.

ಅವರು ನಗರದ ಆಳಂದ ರಸ್ತೆಯ, ರಾಮತೀರ್ಥ ದೇವಸ್ಥಾನದ ಸಮೀಪದಲ್ಲಿರುವ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ಮಕ್ಕಳಿಗೆ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ’ಬಸವ ಪಂಚಮಿ’ಯ ಪ್ರಯುಕ್ತ ಹಾಲು, ಹಣ್ಣು ವಿತರಿಸಿ ನಂತರ ಮಾತನಾಡುತ್ತಿದ್ದರು.

ನಾಗರ ಪಂಚಮಿಯಂದು ಅಮೃತಕ್ಕೆ ಸಮನಾದ ಹಾಲು ಮತ್ತು ಆಹಾರವನ್ನು ಕಲ್ಲು, ಮಣ್ಣು ಪಾಲು ಮಾಡುವ ಸಂಪ್ರದಾಯವನ್ನು ಬಿಟ್ಟು, ಬಡ, ಅನಾಥ, ದುರ್ಬಲ ಮಕ್ಕಳಿಗೆ ಇವುಗಳನ್ನು ನೀಡುವ ಮೂಲಕ ಅವರಲ್ಲಿ ದೇವರನ್ನು ಕಾಣುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಬಾಲ್ಯದಿಂದಲೇ ನಮ್ಮ ಮಕ್ಕಳಲ್ಲಿ ಇಂತಹ ವೈಜ್ಞಾನಿಕ ಚಿಂತನೆಯನ್ನು ಮೂಡಿಸಿದರೆ ಅವರು ಮುಂದೆ ದೊಡ್ಡವರಾದ ಮೇಲೆ ಆಚರಣೆ ಮಾಡಲಾರರು. ಆದ್ದರಿಂದ ಇದರ ಬಗ್ಗೆ ಎಲ್ಲೆಡೆ ಜಾಗೃತಿ ಉಂಟಾಗಬೇಕಾಗಿದೆಯೆಂದರು.

ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಮಾತನಾಡಿ, ನಮ್ಮ ದೇಶದಲ್ಲಿ ಇಂದಿಗೂ ಕೂಡಾ ಅನೇಕ ಮಕ್ಕಳು ಅಪೌಷ್ಠಿಕತೆಯಿಂದ ಬಳಲಿ, ಸಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲು, ಆಹಾರವನ್ನು ಅನಾವಶ್ಯಕವಾಗಿ ಹಾಳು ಮಾಡಬಾರದು. ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸಿದರೇ ಅದು ಹೆಚ್ಚಿನ ಮಹತ್ವ ಪಡೆದುಕೊಳ್ಳಲು ಸಾಧ್ಯವಾಗುತ್ತದೆಯೆಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ಸದಸ್ಯರುಗಳಾದ ಬಸವರಾಜ ಎಸ್.ಪುರಾಣೆ, ಅಮರ ಜಿ.ಬಂಗರಗಿ, ದಿನೇಶ ಥಂಬದ್, ದೇವೇಂದ್ರಪ್ಪ ಗಣಮುಖಿ, ಪ್ರಭಾಕರ್ ಎನ್.ವಾಕಡೆ ಮಲ್ಲಿಕಾರ್ಜುನ ಕಾಕಂಡಕಿ ಸೇರಿದಂತೆ ಕೊಳಗೇರಿ ಪ್ರದೇಶದ ನಾಗರಿಕರು, ಮಹಿಳೆಯರು, ಮಕ್ಕಳಿದ್ದರು.

emedialine

Recent Posts

ಕೋವಿಡ್‌ನಿಂದ ಮಂಕಾಗಿದ್ದ ರಂಗ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ

ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ…

7 hours ago

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಪತ್ರಿಕಾ ರಂಗದ ಪಾತ್ರ ಅನನ್ಯ: ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ.…

7 hours ago

ರಾಸಯೋ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ : ಪ್ರೊ. ಬಾಬಣ್ಣ ಹೂವಿನಬಾವಿ

ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…

9 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮ

ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…

10 hours ago

ಜಾನಪದ ನೃತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ …

10 hours ago

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ಹನುಮಂತರಾವಗೆ ಅಭಿನಂದನ ಸಮಾರಂಭ

ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…

10 hours ago