ಕಲಬುರಗಿ: ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಜುಲೈ 26 ಕ್ಕೆ ಒಂದು ವರ್ಷ ಪೂರೈಸಿದರುವುದಕ್ಕೆ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬಿಎಸ್ ವೈ ಯವರು ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಹಲವಾರು ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿರುವುದು, ಬಡವರು-ಶ್ರಮೀಕರು,ರೈತರಿಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿರುವ ಜೋತೆಗೆ ಮಹಾಮಾರಿ ಕೊರೋನಾ (ಕೋವಿಡ 19) ನಿರ್ವಹಣೆಯೊಂದಿಗೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿರುವುದು ಯಡಿಯುರಪ್ಪನವರ ಕಾರ್ಯವೈಖರಿಗೆ ಹಿಡಿದ ಕನ್ನಡಿ ಯಾಗಿದೆ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ.