ವಾಡಿ: ಯುವಕರ ಗುಂಪೊಂದು ದಾಳಿ ನಡೆಸುವ ಮೂಲಕ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಎದೆ ನೋವು ತಾಳದೆ ವಿವಾಹಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಪಟ್ಟಣದಲ್ಲಿ ಸಂಭವಿಸಿದೆ.
ಪಟ್ಟಣದ ವಾರ್ಡ್-12 ಕಲಂ ಏರಿಯಾ ನಿವಾಸಿ ಜಗದೀಶ ಮಲ್ಲಿಕಾರ್ಜುನ ಮಹಾರಾಜ (30) ಮೃತಪಟ್ಟ ವ್ಯಕ್ತಿ. ಮೃತ ವ್ಯಕ್ತಿ ಬೈಕ್ ಮೇಲೆ ಶುಕ್ರವಾರ ಮದ್ಯಾಹ್ನ ಗೋಳಾ (ಕೆ) ಮಾರ್ಗವಾಗಿ ವಾಡಿಯಿಂದ ಶಹಾಬಾದ ನಗರಕ್ಕೆ ಹೊರಟಿದ್ದ ಎನ್ನಲಾಗಿದ್ದು, ಶಹಾಬಾದ ನಿಜಾಮ ಬಜಾರ್ ಸಮೀಪ ಯುವಕರ ಗುಂಪೊಂದು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದೆ. ತೀವ್ರ ಹೊಡೆತೆಕ್ಕೆ ತುತ್ತಾಗಿ ಸ್ಥಳದಲ್ಲೇ ಕುಸಿದು ಬಿದ್ದ ಜಗದೀಶನನ್ನು ರಸ್ತೆಯಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸ್ನೇಹಿತರು ವಾಡಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮನೆಗೆ ಕರೆತಂದ ಬಳಿಕ ತೀವ್ರ ಎದೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಪುನಹಃ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಗೆ ಮಡದಿ ಮತ್ತು ಮೂವರು ಮಕ್ಕಳಿದ್ದಾರೆ ಎನ್ನಲಾಗಿದೆ. ಮೃತ ಜಗದೀಶನ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪ್ರತಿಕ್ರೀಯಿಸಿರು ವಾಡಿ ಠಾಣೆ ಪಿಎಸ್‍ಐ ವಿಜಯಕುಮಾರ ಭಾವಗಿ, ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.
ಪ್ರಕರಣಕ್ಕೆ ಸಂಬಂದಿಸಿದಂತೆ ಕೆಲವರನ್ನು ವಶಕ್ಕೆ ಪಡೆದಿರುವ ಶಹಾಬಾದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಘಟನೆ ತಿಳಿದು ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿರುವ ಎಸ್‍ಪಿ ಯಡಾಮಾರ್ಟೀನ್ ಮಾರ್ಬನ್ಯಾಂಗ್, ಹೆಚ್ಚುವರಿ ಎಸ್‍ಪಿ, ಡಿವೈಎಸ್‍ಪಿ ವೆಂಕನಗೌಡ ಪಾಟೀಲ ಹಾಗೂ ಸಿಪಿಐ ಕೃಷ್ಣಪ್ಪ ಕಲ್ಲದೇವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಮಾಹಿತಿ ಕಲೆಹಾಕಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…